ಕನ್ನಡಪ್ರಭ ವಾರ್ತೆ ಕಾಪು
ನಂತರ ಮಾತನಾಡಿದ ಅವರು, ಉಡುಪಿ ತಾಲೂಕಿನಲ್ಲಿ ಈಗಾಗಲೇ 65 ಗ್ರಂಥಾಲಯಗಳು ಮನೆ, ಅಂಗಡಿ, ಆಸ್ಪತ್ರೆ, ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣಗೊಂಡಿದೆ. 100 ದಿನಗಳಲ್ಲಿ ನೂರು ಗ್ರಂಥಾಲಯ ನಿರ್ಮಾಣಗೊಳ್ಳುವ ಆಶಯವನ್ನು ಹೊಂದಿದ್ದು, ಕಸಾಪ ಕಾಪು ತಾಲೂಕು ಘಟಕ ಈ ಅಭಿಯಾನದಲ್ಲಿ ನಮ್ಮೊಂದಿಗೆ ಸಹಕರಿಸುತ್ತಿದೆ ಎಂದರು.ಈ ಸಂದರ್ಭದಲ್ಲಿ ಕಸಾಪ ಕಾಪು ತಾಲೂಕು ಘಟಕ ಅಧ್ಯಕ್ಷ ಪುಂಡಲೀಕ ಮರಾಠೆ, ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೊಶಾಧಿಕಾರಿ ಜಗದೀಶ ಆಚಾರ್ಯ, ಸದಸ್ಯರಾದ ವೈಲೆಟ್ ಕಾಸ್ತಲಿನೂ, ಉಮೇಶ್ ರಾವ್, ಡೆನಿಸ್ ಡಿಸೋಜ, ವಿನ್ಸಂಟ್ ಕಾಸ್ತಲಿನೂ, ಅಶೋಕ, ಹರೀಶ್, ವಿರೇಂದ್ರ ಪಾಟ್ಕರ್, ವಿಶ್ವನಾಥ್ ಬಾಂದೇಲ್ಕರ್, ಸುನೀಲ್, ಕಸಾಪ ಉಡುಪಿ ತಾಲೂಕು ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಮನೆಯೇ ಗ್ರಂಥಾಲಯ ಇದರ ಸಂಚಾಲಕ ರಾಘವೇಂದ್ರ ಪ್ರಭು ಕವಾ೯ಲು, ದೀಪಾ ಚಂದ್ರಕಾಂತ್ ಮೊದಲಾದವರಿದ್ದರು.