ನಾಡು, ನುಡಿ, ಸಾಹಿತ್ಯ ಕೃಷಿ ಪ್ರಗತಿಗೆ ಕಸಾಪ ಕೊಡುಗೆ ಪ್ರಶಂಸಾರ್ಹ

KannadaprabhaNewsNetwork |  
Published : May 07, 2026, 03:15 AM IST
ನಾಡು-ನುಡಿ, ಸಾಹಿತ್ಯ ಕೃಷಿ ಪ್ರಗತಿಗೆ ಕಸಾಪ ಕೊಡುಗೆ ಪ್ರಶಂಸಾರ್ಹ : ರಾಮದುರ್ಗ.  | Kannada Prabha

ಸಾರಾಂಶ

ಕನ್ನಡ ನಾಡು, ನುಡಿಗಾಗಿ, ಕನ್ನಡಿಗರಲ್ಲಿ ಭಾಷಾಭಿಮಾನ ಬೆಳೆಸಲು ನಾಡು, ನುಡಿ ಏಳಿಗೆಗೆ ಸಾಹಿತ್ಯ ಕೃಷಿ ಬೆಳವಣಿಗೆಗೆ ಕಸಾಪ ಕೊಡುಗೆ ಪ್ರಶಂಸಾರ್ಹ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ರಬಕವಿ- ಬನಹಟ್ಟಿ ತಾಲೂಕು ಘಟಕದ ಅಧ್ಯಕ್ಷ ಮೃತ್ಯುಂಜಯ ರಾಮದುರ್ಗ ಹೇಳಿದರು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಕನ್ನಡ ನಾಡು, ನುಡಿಗಾಗಿ, ಕನ್ನಡಿಗರಲ್ಲಿ ಭಾಷಾಭಿಮಾನ ಬೆಳೆಸಲು ನಾಡು, ನುಡಿ ಏಳಿಗೆಗೆ ಸಾಹಿತ್ಯ ಕೃಷಿ ಬೆಳವಣಿಗೆಗೆ ಕಸಾಪ ಕೊಡುಗೆ ಪ್ರಶಂಸಾರ್ಹ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ರಬಕವಿ- ಬನಹಟ್ಟಿ ತಾಲೂಕು ಘಟಕದ ಅಧ್ಯಕ್ಷ ಮೃತ್ಯುಂಜಯ ರಾಮದುರ್ಗ ಹೇಳಿದರು.

ರಬಕವಿಯ ಶ್ರೀಘಟ್ಟಗಿ ಬಸವೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಘಟಕ ಬಾಗಲಕೋಟೆ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ರಬಕವಿ-ಬನಹಟ್ಟಿ ವಲಯ ಮಹಾಲಿಂಗಪುರವರು ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಕ್ಕಾಗಿ ಹಿರಿಯರು ಮಾಡಿದ ಹೋರಾಟ, ತ್ಯಾಗ ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಸದಾ ಸ್ಮರಿಸಬೇಕು ಎಂದರು.ಕರ್ನಾಟಕದ ಗಡಿಯಲ್ಲಿ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಗಟ್ಟಿಗೊಳಿಸಲು ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ಮತ್ತು ಆರ್ಥಿಕ ಸೌಲಭ್ಯವನ್ನು ಸರ್ಕಾರ ಕಲ್ಪಿಸಬೇಕು ಎಂದರು.ಹಿರಿಯ ಸಾಹಿತಿ ಶಿವಾನಂದ ದಾಶಾಳ ಅವರು ಕಸಾಪ ನಡೆದು ಬಂದ ದಾರಿ ಕುರಿತು ಉಪನ್ಯಾಸ ನೀಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ, ಧ್ಯೇಯೋದ್ದೇಶಗಳನ್ನು ಪ್ರತಿಯೊಬ್ಬ ಕನ್ನಡಿಗನಿಗೆ ಮನವರಿಕೆ ಮಾಡಿಕೊಡುವಲ್ಲಿ ಕಸಾಪ ನಿರಂತರ ಕಾರ್ಯತತ್ಪರವಾಗಿದೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಮಂಡಿಸಲಾಗುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಸ್ಪಂದಿಸಬೇಕು ಎಂದರು. ಕಸಾಪ ಗ್ರಾಮೀಣ ಭಾಗದಲ್ಲಿಯೂ ಸಮ್ಮೇಳನಗಳನ್ನು ಆಯೋಜಿಸಿ ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಕುರಿತು ಜಾಗೃತಿ ಮೂಡಿಸುತ್ತ ಬಂದಿದೆ. ರಬಕವಿ-ಬನಹಟ್ಟಿ ತಾಲೂಕು ಕಸಾಪ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬರುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ತಾಲೂಕು ಕಸಾಪ ಅಧ್ಯಕ್ಷ ಕಸಾಪ ಇತಿಹಾಸ ವಿವರಿಸಿ, ಪ್ರತಿಯೊಬ್ಬ ಕನ್ನಡಿಗ ಕಸಾಪ ಸದಸ್ಯತ್ವ ಪಡೆದುಕೊಳ್ಳಬೇಕು ಎಂದರು.ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬನಹಟ್ಟಿಯ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಸುಶಾಂತ ಶ್ರೀಶೈಲ ಬುರ್ಲಿ ಅವರನ್ನು ಸನ್ಮಾನಿಸಲಾಯಿತು. ಬಿ.ಎಂ.ಮಟ್ಟಿಕಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಪ್ಪ ಪೂಜಾರಿ, ಕಸಾಪ ಜಿಲ್ಲಾ ಘಟಕದ ಮಹಿಳಾ ಪ್ರತಿನಿಧಿ ದಾಕ್ಷಾಯಣಿ ಮಂಡಿ, ತೇರದಾಳ ತಾಲೂಕು ಕಸಾಪ ಅಧ್ಯಕ್ಷ ಗಂಗಾಧರ ಮೋಪಗಾರ, ಮಹಾಲಿಂಗಪುರ ವಲಯ ಅಧ್ಯಕ್ಷ ಬಸವರಾಜ ಮೇಟಿ ಇದ್ದರು.ಅನಸೂಯಾ ಹಿರೇಮಠ ಪ್ರಾರ್ಥಿಸಿದರು. ಚಂದ್ರಪ್ರಭಾ ಬಾಗಲಕೋಟ ಸ್ವಾಗತಿಸಿದರು. ಡಾ.ಚಂದ್ರಕಾಂತ ಹೊಸೂರ, ಶ್ರೀಶೈಲ ಬುರ್ಲಿ ನಿರೂಪಿಸಿದರು. ದಾನಪ್ಪ ಆಸಂಗಿ ವಂದಿಸಿದರು.ಯಶವಂತ ವಾಜಂತ್ರಿ, ಮಹಾದೇವ ಕವಿಶೆಟ್ಟಿ, ಎಸ್.ಎಸ್. ಹಿರೇಮಠ, ಈರಯ್ಯ ಹಿರೇಮಠ, ಚಿದಾನಂದ ಸೊಲ್ಲಾಪೂರ, ಶರತ್ ಜಂಬಗಿ, ಮಹಾಶಾಂತ ಶೆಟ್ಟಿ, ಈರಪ್ಪ ಮನ್ಮಿ, ಎಂ.ಆರ್. ಕುಂಬಾರ, ಶೈಲಾ ಮಿರ್ಜೆ ಇನ್ನಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

24ಕ್ಕೆ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಠೇವಣಿ ಹಣ ನೀಡಲು ಆಗ್ರಹಿಸಿ ಪ್ರತಿಭಟನೆ