ಕನ್ನಡಪ್ರಭ ವಾರ್ತೆ ಚಳ್ಳಕೆರೆ
ನಾಯಕನಹಟ್ಟಿ ವಿದ್ಯಾವಿಕಾಸ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಚಿತ್ರದುರ್ಗ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿರಂತರವಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಎಲ್ಲಾ ವರ್ಗದ ಜನರನ್ನು ತಲುಪಲು ಯಶಸ್ವಿಯಾಗಿದೆ. ಕನ್ನಡ ಭಾಷೆ ಬೆಳವಣಿಗೆ ಬಗ್ಗೆ ಎಲ್ಲರಲ್ಲೂ ಆತ್ಮವಿಶ್ವಾಸ ಮೂಡಿಸುವ ವಿಚಾರದಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಮಾತನಾಡಿ, ಕನ್ನಡ ನಾಡಿನಲ್ಲಿಯೇ ಭಾಷೆಯ ಉಳಿವಿನ ಬಗ್ಗೆ ಹೋರಾಟ ನಡೆಸುವ ಅನಿವಾರ್ಯತೆ ಉಂಟಾಗಿದೆ. ಅನ್ಯ ಭಾಷೆಗಳು ಕನ್ನಡ ಭಾಷೆಯ ಮೇಲೆ ಹೆಚ್ಚು ಸವಾರಿ ಮಾಡುತ್ತಿದ್ದು, ಅವುಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ನಾವೆಲ್ಲರೂ ಸಂಘಟಿತರಾಗಬೇಕು ಎಂದರು.ಕನ್ನಡ ಪ್ರಾಧ್ಯಾಪಕ ಜಿ.ವಿ.ರಾಜಣ್ಣ ಉಪನ್ಯಾಸ ನೀಡಿ, ಕನ್ನಡದ ನೆಲದಲ್ಲಿಯೇ ಕನ್ನಡವನ್ನು ವೈಭವೀಕರಿಸುವ ವಿಚಾರದಲ್ಲಿ ನಾವ್ಯಾರೂ ಹಿಂದೆ ಬೀಳಬಾರದು. ಕನ್ನಡ ಬೆಳವಣಿಗೆ ಇನ್ನೂ ಎತ್ತರಕ್ಕೆ ತೆಗೆದುಕೊಂಡು ಹೋಗುವ ಕಾರ್ಯ ನಾವೆಲ್ಲರೂ ಸೇರಿ ಮಾಡಬೇಕು. ಅನ್ಯ ಭಾಷೆಯ ಉಪಯೋಗ ನಿಯಂತ್ರಣದಲ್ಲಿರಬೇಕು ಎಂದರು.