ಸೋಮವಾರಪೇಟೆ: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ರೈತ ಹೋರಾಟ ಸಮಿತಿಯಿಂದ ೧೧ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಚಕ್ರವರ್ತಿ ಹೇಳಿದರು.
೧೧ರಂದು ಬೆಳಿಗ್ಗೆ ೧೦.೩೦ಕ್ಕೆ ಸುದರ್ಶನ ವೃತ್ತದಲ್ಲಿ ಜಮಾವಣೆಗೊಂಡು ನಂತರ ಪ್ರತಿಭಟನಾ ಮೆರವಣಿಗೆಯ ಮೂಲಕ ಟೋಲ್‌ಗೇಟ್, ಗಾಂಧಿ ಮೈದಾನಕ್ಕೆ ತೆರಳಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಲಾಗುವುದು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು, ಸಂಘ ಸಂಸ್ಥೆಗಳ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.
ಕಸ್ತೂರಿ ರಂಗನ್ ವರದಿಯಲ್ಲಿ ಕೊಡಗಿನ ೫೫ ಗ್ರಾಮಗಳು ಉಲ್ಲೇಖವಾಗಿವೆ. ಗ್ರಾಮಗಳ ಅಂಚಿನಿಂದ ೧೩ ಕಿ.ಮೀ. ವ್ಯಾಪ್ತಿಗೆ ಈ ವರದಿಯ ಪ್ರಭಾವ ಇರಲಿದೆ. ಕೊಡಗಿನ ಬಹುತೇಕ ಗ್ರಾಮಗಳು ಅರಣ್ಯದ ಅಂಚಿಗೆ ಇದ್ದು, ವರದಿಯ ಅನುಷ್ಠಾನದಲ್ಲಿ ಭವಿಷ್ಯದಲ್ಲಿ ಸಮಸ್ಯೆ ಎದುರಾಗಲಿದೆ ಎಂದರು. ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಸಮಸ್ಯೆಯೇ ಇಲ್ಲ ಎಂದು ಪರಿಸರವಾದಿಗಳೆಂದು ಹೇಳಿಕೊಳ್ಳುವ ಕೆಲವರು ಹೇಳುವ ಮೂಲಕ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಹಾಗೂ ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಭೂಮಿ ಉಳಿಯಬೇಕಾಗಿದೆ. ಇದನ್ನು ಅರಣ್ಯ ಅಥವಾ ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಲು ಯಾವ ರೈತರೂ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಹೋರಾಟ ಅನಿವಾರ್ಯವಾಗಿದೆ ಎಂದು ಸುರೇಶ್ ಚಕ್ರವರ್ತಿ ಹೇಳಿದರು.ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ಕರೆದು ವರದಿಯ ಬಗ್ಗೆ ಚರ್ಚೆ ನಡೆಸಿ, ಜನರ ಅಭಿಪ್ರಾಯವನ್ನು ಸರ್ಕಾರಕ್ಕೆ ತಿಳಿಸುವಂತೆ, ತಕರಾರು ಸಲ್ಲಿಸುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಮಾಡಿದ್ದೆವು. ಈವರೆಗೆ ಅಧಿಕಾರಿಗಳು ಸಭೆ ಕರೆದಿಲ್ಲ. ಈ ಹಿನ್ನೆಲೆ ಎಲ್ಲಾ ಗ್ರಾಮ ಸಮಿತಿಗಳು ಸ್ವಯಂಪ್ರೇರಿತರಾಗಿ ತಕರಾರು ಸಲ್ಲಿಸಬೇಕು ಎಂದರು.
ಕಸ್ತೂರಿ ರಂಗನ್ ವರದಿ ಅನುಷ್ಠಾನವನ್ನು ಹಿಂಪಡೆಯಬೇಕು. ಪರಿಸರ ಸೂಕ್ಷ್ಮ ವಲಯವನ್ನು ಶೂನ್ಯಕ್ಕೆ ಇಳಿಸಬೇಕು. ಸೆಕ್ಷನ್ ೪ ವಾಪಸ್ ಪಡೆಯಬೇಕು. ಸಿ ಮತ್ತು ಡಿ ಲ್ಯಾಂಡ್ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂದರು.
ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ, ಕಾಫಿ ಗಿಡಗಳಲ್ಲಿ ಹೂ ಅರಳುವಿಕೆ ವಿಳಂಬವಾಗಿದೆ. ಬಳಿಕ ಆಗಾಗ್ಗೆ ಸಣ್ಣ ಪ್ರಮಾಣದ ಮಳೆಯಾದ ಕಾರಣ ಹಲವು ಹಂತಗಳಲ್ಲಿ ಕಾಫಿ ಗಿಡಗಳು ಹೂ ಬಿಟ್ಟಿವೆ. ಇದರಿಂದ ಕಾಫಿ ಕಾಯಿಗಳ ಬೆಳವಣಿಗೆಯ ಮೇಲೂ ಪರಿಣಾಮ ಬೀರಿದೆ ಎಂದು ಸಂಘದ ಅಧ್ಯಕ್ಷ ಬಿ.ಎಂ. ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಸರ್ಕಾರಕ್ಕೆ ತಿಳಿಸಿದ್ದಾರೆ.
ಮಳೆಯ ಕೊರತೆಯಿಂದ ಉಂಟಾಗುವ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮೋಡ ಬಿತ್ತನೆ ಕೊಡಗಿಗೆ ಅವಶ್ಯಕತೆ ಇಲ್ಲ. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ನೆರವು ನೀಡಬೇಕು ಎಂದು ಸಂಘ ಆಗ್ರಹಿಸಿದೆ.