ಕಸ್ತೂರಿರಂಗನ್ ವರದಿ: ನಾಳೆ ಹೆಬ್ರಿಯಲ್ಲಿ ಸಿಎಂ ಅಹವಾಲು ಆಲಿಕೆ

KannadaprabhaNewsNetwork |  
Published : Sep 17, 2026, 02:45 AM IST
15ಉದಯ | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ಕಸ್ತೂರಿರಂಗನ್ ವರದಿಯ ಅಧಿಸೂಚನೆಯಿಂದ ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಉಂಟಾಗಿರುವ ಆತಂಕವನ್ನು ಆಲಿಸಲು ಖುದ್ದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 18ರಂದು ಹೆಬ್ರಿಗೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹೇಳಿದರು.

ಉಡುಪಿ: ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ಕಸ್ತೂರಿರಂಗನ್ ವರದಿಯ ಅಧಿಸೂಚನೆಯಿಂದ ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಉಂಟಾಗಿರುವ ಆತಂಕವನ್ನು ಆಲಿಸಲು ಖುದ್ದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 18ರಂದು ಹೆಬ್ರಿಗೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಧಿಸೂಚನೆಯಂತೆ ಕಸ್ತೂರಿರಂಗನ್ ವರದಿ ಜಾರಿಯಾದರೇ ಕಾರ್ಕಳ ವಿಧಾನಸಭಾ ಕ್ಷೇತ್ರದ ಹತ್ತಾರು ಗ್ರಾಮಗಳ ನಿವಾಸಿಗಳಿಗೆ ತೊಂದರೆಯಾಗಲಿದೆ. ಈ ವರದಿ ತಯಾರಿಸುವ ಮೊದಲು ಸ್ಥಳೀಯಲಾಗಿ ಗ್ರಾಮಸಭೆ ನಡೆಸದೆ. ಕೇವಲ ವೈಮಾನಿಕ ಸಮೀಕ್ಷೆ ಆಧರಿಸಿ ಪಶ್ಚಿಮಘಟ್ಟದ ತಪ್ಪಲು, ಜನವಸತಿ ಪ್ರದೇಶಗಳನ್ನೂ ಜೀವ ಪರಿಸರ ಸೂಕ್ಷ್ಮ ಎಂದು ನಿರ್ಧಾರ ಕೈಗೊಂಡಿರುವುದು ಸರಿಯಲ್ಲ, ಆದ್ದರಿಂದ ಕೇಂದ್ರ ಸರ್ಕಾರ ಈ ಅದಿಸೂಚನೆಯನ್ನು ತಕ್ಷಣ ಹಿಂಪಡೆಯಬೇಕು, ಈ ಅಧಿಸೂಚನೆಯನ್ನು ಒಪ್ಪಬಾರದು, ತಿರಸ್ಕರಿಸಬೇಕು ಎಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಅವರ ಜನ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಾದಿತ ಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಭೂಹಕ್ಕಿನ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮುನಿಯಾಲು ಮನವಿ ಮಾಡಿದರು.ತುಳು ಭಾಷಾ ಮಾನ್ಯತೆ ಬೇಡಿಕೆ: ಅಲ್ಲದೇ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಹಾಗೂ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು, ತುಳು ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಎಂಬ ಬೇಡಿಕೆಗಳನ್ನೂ ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.

ಕರಾವಳಿಯ ಬಂದರು, ವಿಮಾನ ನಿಲ್ದಾಣ, ರೈಲು ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಇರುವ ಮೂಲಸೌಕರ್ಯವನ್ನು ಬಳಸಿಕೊಂಡು ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆಯೊಂದನ್ನು ರೂಪಿಸಬೇಕು ಎಂದೂ ಒತ್ತಾಯಿಸಲಾಗುತ್ತದೆ ಎಂದವರು ಹೇಳಿದರು.

ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾಂಗ್ರೆಸ್ ಮುಖಂಡರಾದ ಪ್ರದೀಪ್ ಬೇಲಾಡಿ, ಭಾನು ಭಾಸ್ಕರ್ ಪೂಜಾರಿ, ಅಜಿತ್ ಹೆಗ್ಡೆ, ಅನಿಲ್ ಪೂಜಾರಿ ಮಾಳ, ಯೋಗೀಶ, ನಯನಾ ಇನ್ನಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಲುವೆಗೆ ನೀರು ಹರಿಸಿ, ಸಮರ್ಪಕ ವಿದ್ಯುತ್ ಪೂರೈಸಲು ಆಗ್ರಹ
ಅಗ್ನಿ ದುರಂತ: ಗಾಯಗೊಂಡಿದ್ದ ಮತ್ತಿಬ್ಬರ ಸಾವು