ಪಶ್ಚಿಮ ಘಟ್ಟಗಳ ಕುರಿತ ಡಾ.ಕಸ್ತೂರಿ ರಂಗನ್‌ ವರದಿ ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕಾರ

KannadaprabhaNewsNetwork |  
Published : Sep 27, 2024, 01:15 AM ISTUpdated : Sep 27, 2024, 07:20 AM IST
ಪಶ್ಚಿಮ ಘಟ್ಟಗಳು | Kannada Prabha

ಸಾರಾಂಶ

ಡಾ.ಕಸ್ತೂರಿ ರಂಗನ್‌ ವರದಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಕುರಿತು ಕೇಂದ್ರ ಸರ್ಕಾರದ ಆರನೇ ಕರಡು ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕರಿಸಿದೆ. ಸ್ಥಳೀಯ ಅಧ್ಯಯನದ ಅಗತ್ಯತೆ ಮತ್ತು ಜನರ ಸ್ಥಳಾಂತರದ ಕುರಿತು ಕಳವಳಗಳನ್ನು ಸರ್ಕಾರ ವ್ಯಕ್ತಪಡಿಸಿದೆ.

 ಬೆಂಗಳೂರು : ಪಶ್ಚಿಮಘಟ್ಟಗಳ ಕುರಿತ ಡಾ.ಕಸ್ತೂರಿ ರಂಗನ್‌ ವರದಿ ಹಾಗೂ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆರನೇ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಕೇಂದ್ರ ಸರ್ಕಾರವು ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜು.31ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಿತ್ತು. ಇದಕ್ಕೂ ಮೊದಲು ಐದು ಬಾರಿ ಅಧಿಸೂಚನೆ ಹೊರಡಿಸಿದ್ದರೂ ರಾಜ್ಯ ಸರ್ಕಾರ ತಿರಸ್ಕರಿಸಿತ್ತು. ಇದೀಗ ಗುರುವಾರ ಆರನೇ ಬಾರಿ ತಿರಸ್ಕಾರ ಮಾಡಿದೆ.

ಉನ್ನತ ಮಟ್ಟದ ಕಾರ್ಯನಿರತ ತಂಡವು ಪಶ್ಚಿಮಘಟ್ಟಗಳ ಪ್ರದೇಶವನ್ನು ನಿಗದಿಗೊಳಿಸಲು ವಸ್ತುನಿಷ್ಠವಾಗಿ ಕೆಲಸ ಮಾಡಿಲ್ಲ. ಇನ್ನು ಡಾ.ಕೆ.ಕಸ್ತೂರಿ ರಂಗನ್‌ ವರದಿ ಅನ್ವಯ ಪರಿಸರ ಸೂಕ್ಷ್ಮ ಪ್ರದೇಶವನ್ನಾಗಿ 20,668 ಚ.ಕಿ.ಮೀ. ಪ್ರದೇಶವನ್ನು ಗುರುತಿಸಲಾಗಿದೆ. ವಾಸ್ತವ ಲೋಪಗಳ ತಿದ್ದುಪಡಿ ಮಾಡಿದಾಗ ಪರಿಸರ ಸೂಕ್ಷ್ಮ ಪ್ರದೇಶವು 19,252.70 ಚ.ಕಿ.ಮೀ. ಆಗುತ್ತದೆ. 

ಆದರೆ ವಿವಿಧ ಕಾನೂನುಗಳ ಅಡಿಯಲ್ಲಿ ಸಂರಕ್ಷಿತ ಪ್ರದೇಶ, ಅಧಿಸೂಚಿತ ಅರಣ್ಯ ಅಥವಾ ಪರಿಸರ ಸೂಕ್ಷ್ಮ ವಲಯವಾಗಿ 16,036 ಚ.ಕಿ.ಮೀ. ಪ್ರದೇಶವನ್ನು ಮಾತ್ರ ಸಂರಕ್ಷಿಸಲಾಗುತ್ತಿದೆ. ಉಳಿದ 4 ಸಾವಿರಕ್ಕೂ ಹೆಚ್ಚು ಚ.ಕಿ.ಮೀ. ಪ್ರದೇಶದಲ್ಲಿನ ಜನರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಇದಕ್ಕೆ ಸ್ಥಳೀಯ ಮಟ್ಟದಲ್ಲಿ ಅಧ್ಯಯನ ಅಗತ್ಯವಿದ್ದು, ಯಾವುದೇ ಅಧ್ಯಯನ ಇಲ್ಲದೆ ಕೇಂದ್ರ ಹೊರಡಿಸಿರುವ ಅಧಿಸೂಚನೆ ಒಪ್ಪಲಾಗುವುದಿಲ್ಲ ಎಂದು ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು