ಕನ್ನಡಪ್ರಭ ವಾರ್ತೆ ಉಡುಪಿ
ರೋಟರಿ ಸಹಾಯಕ ಗವರ್ನರ್ ಜಗನ್ನಾಥ ಕೋಟೆ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್., ವಿವಿಧ ತಂಬಾಕಿನ ಬಗ್ಗೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನಃಶಾಸ್ತ್ರಜ್ಞೆ ಕ್ಯಾಥರಿನ್ ಅವರು ಮಾದಕ ದ್ರವ್ಯ ವ್ಯಸನದ ಬಗ್ಗೆ, ಉಡುಪಿ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಅದಕ್ಕೆ ಇರುವ ಕಾಯ್ದೆ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ತುಳಸಿ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸ್ಥಳೀಯ ಗಣ್ಯರಾದ ಸತ್ಯೇಂದ್ರ ಪೈ, ಶ್ರೀಕರ ಅಂಚನ್, ಗಣೇಶ್ ಕಿಣಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಲಕ್ಷ್ಮೀ ನಿರೂಪಿಸಿದರು. ಶಂಕರ್ ಪೂಜಾರಿ ವಂದಿಸಿದರು.