ಕಟೀಲು: ಕೀರ್ತಿಶೇಷ ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ

KannadaprabhaNewsNetwork |  
Published : Aug 25, 2025, 01:00 AM IST
ಕಟೀಲು ಕೀರ್ತಿ ಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ | Kannada Prabha

ಸಾರಾಂಶ

ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಹಾಗೂ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಕಟೀಲು ದಿ.ಗೋಪಾಲಕೃಷ್ಣ ಅಸ್ರಣ್ಣ ಸಭಾ ಭವನದಲ್ಲಿ ಕಟೀಲು ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿಕಟೀಲು ಕ್ಷೇತ್ರ ಅನ್ನ ಭಾಗ್ಯ ಹಾಗೂ ಸರಸ್ವತಿ ಸೇವೆ ಮೂಲಕ ಪ್ರಸಿದ್ಧಿ ಪಡೆದಿದ್ದು ಕಟೀಲಿನ ಗೋಪಾಲ ಕೃಷ್ಣ ಅಸ್ರಣ್ಣರು ಕಟೀಲು ಕ್ಷೇತ್ರಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದು ಅದು ಮುಂದುವರಿಯುತ್ತಿದೆ ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ. ಎಲ್. ಧರ್ಮ ಹೇಳಿದ್ದಾರೆ.ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಹಾಗೂ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಕಟೀಲು ದಿ.ಗೋಪಾಲಕೃಷ್ಣ ಅಸ್ರಣ್ಣ ಸಭಾ ಭವನದಲ್ಲಿ ಜರುಗಿದ ಕಟೀಲು ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ದಿ. ಗೋಪಾಲಕೃಷ್ಣ ಆಸ್ರಣ್ಣ ಅರ್ಚಕ ಪ್ರಶಸ್ತಿಯನ್ನು ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ವೇದಮೂರ್ತಿ ಸಗ್ರಿ ವೇದವ್ಯಾಸ ಐತಾಳರಿಗೆ, ದಿ.ಗೋಪಾಲಕೃಷ್ಣ ಆಸ್ರಣ್ಣ ಮೊಕ್ತೇಸರ ಪ್ರಶಸ್ತಿಯನ್ನು ಪುತ್ತಿಗೆ ಶ್ರೀ ಸೋಮನಾಥ ದೇವಸ್ಥಾನ ಅನುವಂಶಿಕ ಮೊಕ್ತೇಸರ ಕುಲದೀಪ ಎಂ. ಚೌಟರ ಅರಮನೆಯವರಿಗೆ ಹಾಗೂ ಕದ್ರಿ ಆಸ್ರಣ್ಣ ಅಭಿಮಾನಿ ಬಳಗ ಕೊಡುಗೆ ದಿ.ಗೋಪಾಲಕೃಷ್ಣ ಆಸ್ರಣ್ಣ ಕಲಾವಿದ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ ವಾಟೆಪಡ್ಬು ವಿಷ್ಣು ಶರ್ಮರವರಿಗೆ ನೀಡಿ ಗೌರವಿಸಲಾಯಿತು.ಕರ್ಣಾಟಕ ಬ್ಯಾಂಕ್‌ ಎಂಡಿ, ಸಿಇಒ ರಾಘವೇಂದ್ರ ಶ್ರೀನಿವಾಸ ಭಟ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯದ ಜನರಲ್ ಮ್ಯಾನೇಜರ್ ರಾಜೇಶ್ ಖನ್ನ, ದುರ್ಗಾಸಂಜೀವನಿ ಆಸ್ಪತ್ರೆಯ ಡಾ. ಶಿವಾನಂದ ಪ್ರಭು, ಜೈನ್ ಮಿಲನ್ ಮಂಗಳೂರಿನ ಅಧ್ಯಕ್ಷ ರತ್ನಾಕರ ಜೈನ್ ಮುಖ್ಯ ಅತಿಥಿಗಳಾಗಿದ್ದರು.ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಧನಲಕ್ಷ್ಮೀ ಕ್ಯಾಶ್ಯ ಇಂಡಸ್ಟ್ರೀಸ್, ಮೂಡುಬಿದಿರೆಯ ಶ್ರೀಪತಿ ಭಟ್‌, ಯುಗಪುರುಷ, ಕಿನ್ನಿಗೋಳಿಯ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ನಂದಿನಿ ಬ್ರಾಹ್ಮಣ ಸಭಾ ಅಧ್ಯಕ್ಷ ಡಾ. ಪದ್ಮನಾಭ ಭಟ್ ಉಪಸ್ತಿತರಿದ್ದರು.ಕೃಷಿಕ ಸಾಂತ್ಯ ಹರೀಶ್ ಶೆಟ್ಟಿ ಕೊಡೆತ್ತೂರು. ಜಾನ್ ಡೆನಿಸ್ ಡಿಸೋಜ ಅವರನ್ನು ಗೌರವಿಸಲಾಯಿತು.ಐಕಳ ಹರೀಶ್ ಶೆಟ್ಟಿ ಡಾ.ಶಿವಾನಂದ ಪ್ರಭು, ಎಂ.ಬಿ.ಪುರಾಣಿಕ್‌ ಅವರನ್ನು ಗೌರವಿಸಲಾಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ನಯನಾಭಿರಾಮ ಉಡುಪ, ನಮ್ಮ ಕುಡ್ಲದ ಲೀಲಾಕ್ಷ ಕರ್ಕೇರ, ಶಾರದ ಸಮೂಹ ಶಿಕ್ಷಣ ಸಂಸ್ಥೆಯ ಎಂ ಬಿ ಪುರಾಣಿಕ್, ರವೀಂದ್ರ ಶೇಟ್, ಪಟ್ಲ ಪೌಂಡೇಶನ್‌ನ ಪಟ್ಲ ಸತೀಶ್ ಶೆಟ್ಟಿ, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪಾರಿಜಾತ ಯಕ್ಷಗಾನ ಬಯಲಾಟ, ಸಭಾ ಕಾರ್ಯಕ್ರಮದ ಬಳಿಕ ನರಕಾಸುರ ವಧೆ ಯಕ್ಷಗಾನ ಬಯಲಾಟ ಪ್ರದರ್ಶನ ಜರಗಿತು. ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಸ್ವಾಗತಿಸಿದರು. ಡಾ. ರಮ್ಯ ರವಿತೇಜ ನಿರೂಪಿಸಿದರು. ಪು ಗುರುಪ್ರಸಾದ್‌ ಭಟ್‌ ವಂದಿಸಿದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ