ತಾಲೂಕು ಕೇಂದ್ರವಾಗಲು ಕೌಜಲಗಿ ಗ್ರಾಮ ಅರ್ಹ

KannadaprabhaNewsNetwork |  
Published : Jun 28, 2025, 12:20 AM IST
ಕೌಜಲಗಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಯಲ್ಲಮ್ಮದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಭೌಗೋಳಿಕವಾಗಿ ಕೌಜಲಗಿ ಗ್ರಾಮ ಹಲವಾರು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ತಾಲೂಕು ಕೇಂದ್ರವಾಗಲು ಎಲ್ಲ ಅರ್ಹತೆಗಳನ್ನು ಹೊಂದಿದೆ

ಕನ್ನಡಪ್ರಭ ವಾರ್ತೆ ಮೂಡಲಗಿ

ಭೌಗೋಳಿಕವಾಗಿ ಕೌಜಲಗಿ ಗ್ರಾಮ ಹಲವಾರು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ತಾಲೂಕು ಕೇಂದ್ರವಾಗಲು ಎಲ್ಲ ಅರ್ಹತೆಗಳನ್ನು ಹೊಂದಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಯಲ್ಲಮ್ಮದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಮತ್ತು ದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹಮ್ಮಿಕೊಂಡ ಕುಂಭಮೇಳ, ವಾದ್ಯಮೇಳ, ಜಾನಪದ ಕಲಾ ತಂಡದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡ ಅವರು ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು.

ಕೌಜಲಗಿ ಗ್ರಾಮವು ಅತಿ ದೊಡ್ಡ ಗ್ರಾಮವಾಗಿದೆ. ಹಿಂದೊಂದು ಕಾಲದಲ್ಲಿ ಬರಗಾಲದಿಂದ ತತ್ತರಿಸಿ ಹೊಗಿತ್ತು. ಇವತ್ತು ಗ್ರಾಮದೊಳಗೆ ನೀರಾವರಿಯ ಸೌಲಭ್ಯವಾಗಿರುವುದರಿಂದ ಆರ್ಥಿಕವಾಗಿಯೂ ಕೂಡ ಗ್ರಾಮವು ಬೆಳೆದಿದೆ. ಗ್ರಾಮದಲ್ಲಿ ವ್ಯಾಪಾರ ವಹಿವಾಟಗಳು ಕೂಡಾ ಹೆಚ್ಚಾಗಿದೆ. ತಮ್ಮ ಆರ್ಥಿಕ ವ್ಯವಹಾರಗಳ ದೃಷ್ಟಿಯಿಂದ ಒಂದು ರಾಷ್ಟ್ರೀಕೃತ ಬ್ಯಾಂಕ್‌ ಪ್ರಾರಂಭಿಸಬೇಕಾಗಿ ನನ್ನಲ್ಲಿ ವಿನಂತಿ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನನ್ನ ಪ್ರಯತ್ನ ಮುಂದುವರಿದಿದೆ. ಮುಂದೊಂದು ದಿನ ರಾಷ್ಟ್ರೀಕೃತ ಗ್ರಾಮೀಣ ಬ್ಯಾಂಕ್‌ ತರುವಲ್ಲಿ ನಾನು ಯಶಸ್ವಿಯಾಗುತ್ತೇನೆ. ಅದಕ್ಕೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಕೋರಿದರು.

ಈಗಾಗಲೇ ಕೌಜಲಗಿ ಗ್ರಾಮಕ್ಕೆ ರಾಜ್ಯಸಭಾ ಸಂಸದರ ನಿಧಿಯಿಂದ ಬಸವೇಶ್ವರ ದೇವಸ್ಥಾನಕ್ಕೆ ₹25 ಲಕ್ಷ, ವಿಠ್ಠಲ ಬೀರದೇವರ ದೇವಸ್ಥಾನಕ್ಕೆ ₹10 ಲಕ್ಷ, ಯಲ್ಲಮ್ಮದೇವಿ ದೇವಸ್ಥಾನಕ್ಕೆ ₹10 ಲಕ್ಷ, ಸಾಯಿ ಮಂದಿರಕ್ಕೆ ₹5 ಲಕ್ಷ, ಬಸ್ ಪ್ರಯಾಣಿಕರ ತಂಗುದಾನಕ್ಕೆ ₹5 ಲಕ್ಷ, ಮಾಳಿಂಗರಾಯ ದೇವಸ್ಥಾನಕ್ಕೆ ₹5 ಲಕ್ಷ ಹೀಗೆ ಎಲ್ಲ ಸಮುದಾಯದವರಿಗೂ ಕೂಡಾ ದೊಡ್ಡ ಪ್ರಮಾಣದಲ್ಲಿ ಅನುದಾನ ವಿತರಿಸುವ ಮೂಲಕ ಕೌಜಲಗಿ ಗ್ರಾಮದ ಅಭಿವೃದ್ಧಿಯಲ್ಲಿ ನಾನು ಕೂಡಾ ಅಳಿಲು ಸೇವೆ ಸಲ್ಲಿಸುತ್ತಿದ್ದೇನೆ. ಅದೇ ರೀತಿ ಬರುವಂತಹ ದಿನಗಳಲ್ಲಿ ಯುವಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಒಂದು ಓಪನ್‌ ಜಿಮ್ ಸೌಲಭ್ಯ ಒದಗಿಸಿ ಕೊಡಲು ನಾನು ಪ್ರಯತ್ನಿಸುತ್ತಿದ್ದೇನೆ. ಇನ್ನೂ ಹೆಚ್ಚು ಸೇವೆ ಮಾಡಲು ನಾನು ಸಿದ್ಧನಿದ್ದೇನೆ. ತಾವು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಮಹಾಂತಪ್ಪ ಶಿವನಮೂರಿ, ಮಹಾಂತಪ್ಪ ಲಗಳಿ, ಗುರುಸಿದ್ದ ಬಿಸಗುಪ್ಪಿ, ಸಿದ್ದಪ್ಪ ಹಳ್ಳೂರ, ಈರಪ್ಪಣ್ಣ ಬಿಸಗುಪ್ಪಿ, ಸಿದ್ದಪ್ಪ ಬಿಸಗುಪ್ಪಿ, ರಾಮಣ್ಣ ಲಕ್ಕಪ್ಪನವರ, ಹಣಮಂತ ಲಕ್ಕಪ್ಪನವರ, ಪರಶುರಾಮ ಖಿಲಾರಿ, ಶಿವಣಪ್ಪ ಮೀಸಿ, ಬಸವರಾಜ ಯಲಿಗಾರ, ಬಸವರಾಜ ಲೋಕನ್ನವರ, ಸುಭಾಸ ಕೌಜಲಗಿ, ಶೇಕಪ್ಪ ಮೂಡಲಗಿ, ಬಸಪ್ಪ ಪಟಗುಂದಿ, ಬೀರಪ್ಪ ಖಿಲಾರಿ, ಪರಸಪ್ಪ ಪೂಜೇರಿ, ಬಸಪ್ಪ ಸಣ್ಣಕ್ಕಿ, ಸಂಜು ಮಿರ್ಜಿ, ವಿಠ್ಠಲ ಖಾನಟ್ಟಿ, ಕರೆಪ್ಪ ದೂಳಪ್ಪನವರ, ಗಣೇಶ ಸೆರಗಾರ, ಈರಪ್ಪ ಬಿಸನಕೊಪ್ಪ, ಸಿದ್ದಪ್ಪ ದಾನನನ್ವರ, ಈರಪ್ಪ ಬಿಸಗುಪ್ಪಿ, ರಮೇಶ ಬೇವಿನಕಟ್ಟಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ