ಕಾಪು: ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶಗಳ ವತಿಯಿಂದ ಕಾಪು ಪುರಸಭೆ ವ್ಯಾಪ್ತಿಯ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಂಯುಕ್ತ ಆಶ್ರಯದಲ್ಲಿ ‘ಲೋಕ ಕಲ್ಯಾಣ ಮೇಳ’ ಕಾರ್ಯಕ್ರಮ ಕಾಪು ಪುರಸಭೆ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಇಂತಹ ಮೇಳಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಯೋಜನೆಯಿಂದ ಫಲಾನುಭವಿಗಳು ಸ್ವಯಂ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
‘ಲೋಕ ಕಲ್ಯಾಣ ಮೇಳ’ದ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ, ಸಾಲ ಸೌಲಭ್ಯಗಳು ಹಾಗೂ ಉದ್ಯಮಶೀಲತೆ ಅಭಿವೃದ್ಧಿಗೆ ಸಂಬಂಧಿಸಿದ ಮಾರ್ಗದರ್ಶನವನ್ನು ಸಾರ್ವಜನಿಕರಿಗೆ ನೀಡಲಾಯಿತು.