ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಭವ ಲೋಕಾರ್ಪಣೆ

KannadaprabhaNewsNetwork |  
Published : May 21, 2026, 02:45 AM IST
20ಹಾಲು | Kannada Prabha

ಸಾರಾಂಶ

ಗ್ರಾಮೀಣ ಭಾಗದ ಹಾಲು ಉತ್ಪಾದಕ ಸಂಘಗಳು ಬಲಗೊಳ್ಳುತ್ತಿವೆ. ಸ್ವಂತ ಕಟ್ಟಡದ ಕನಸು ನನಸಾಗಿದೆ. ಮುಂದೆ ಹಾಲಿನ ಸಂಗ್ರಹಣೆ ೫೦೦ ರಿಂದ ೬೦೦ ಲೀಟರ್‌ಗಳಿಗೆ ಏರಿಸಬೇಕು. ರಾಜ್ಯದ ೧೫ ಒಕ್ಕೂಟಗಳಲ್ಲಿ ಗರಿಷ್ಠ ದರ ನೀಡುವ ಒಕ್ಕೂಟ ನಮ್ಮದು. ಲಾಭಾಂಶ ಕಡಿಮೆ ಮಾಡಿ ರೈತರಿಗೆ ನೀಡುತ್ತಿದ್ದೇವೆ. ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ.

ಕಾಪು: ಗ್ರಾಮೀಣ ಭಾಗದ ಹಾಲು ಉತ್ಪಾದಕ ಸಂಘಗಳು ಬಲಗೊಳ್ಳುತ್ತಿವೆ. ಸ್ವಂತ ಕಟ್ಟಡದ ಕನಸು ನನಸಾಗಿದೆ. ಮುಂದೆ ಹಾಲಿನ ಸಂಗ್ರಹಣೆ ೫೦೦ ರಿಂದ ೬೦೦ ಲೀಟರ್‌ಗಳಿಗೆ ಏರಿಸಬೇಕು. ರಾಜ್ಯದ ೧೫ ಒಕ್ಕೂಟಗಳಲ್ಲಿ ಗರಿಷ್ಠ ದರ ನೀಡುವ ಒಕ್ಕೂಟ ನಮ್ಮದು. ಲಾಭಾಂಶ ಕಡಿಮೆ ಮಾಡಿ ರೈತರಿಗೆ ನೀಡುತ್ತಿದ್ದೇವೆ. ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ. ಗುಣಮಟ್ಟದ ಕಲಬೆರಕೆ ರಹಿತ ಹಾಲು ಕೊಡಿ, ಉತ್ತಮ ಮಾರುಕಟ್ಟೆ ಒದಗಿಸುತ್ತೇವೆ ಎಂದು ದ.ಕ.ಹಾಲು ಉತ್ಪಾದಕರ ಒಕ್ಕೂಟ ನಿ. ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ನುಡಿದರು.

ಅವರು ಮಂಗಳವಾರ ಇಲ್ಲಿನ ಶಿರ್ವ ಸಮೀಪದ ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘವು ಖರೀದಿಸಿದ ೪ ಸೆಂಟ್ಸ್ ಸ್ಥಳದಲ್ಲಿ ನಿರ್ಮಿಸಿದ ಸ್ವಂತ ಕಟ್ಟಡ ಉದ್ಭವವನ್ನು ಲೋಕಾರ್ಪಣೆಗೊಳಿಸಿ, ಕೋಡು ಮುಲ್ಕಾಡಿ ಶ್ರೀದುರ್ಗಾಪರಮೆಶ್ವರೀ ದೇವಳದ ಸಭಾಂಗಣದಲ್ಲಿ ಏರ್ಪಡಿಸಿದ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಕೋಡು ವಹಿಸಿದ್ದರು. ಈ ಸಂದರ್ಭದಲ್ಲಿ ಪಂಜಿಮಾರು ಸಹಕಾರಿ ಸಂಘದ ಮಾಜಿ ಅಧಕ್ಷರುಗಳನ್ನು ಅಭಿನಂದಿಸಲಾಯಿತು. ಉದಯ ಎಸ್ ಕೊಟ್ಯಾನ್, ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಸೇರಿದಂತೆ ವೇದಿಕೆಯಲ್ಲಿನ ಗಣ್ಯರು ಶುಭಾಶಂಸನೆ ಗೈದರು.

ವೇದಿಕೆಯಲ್ಲಿ ನಿರ್ದೇಶಕರುಗಳಾದ ಸುಧಾಕರ ಶೆಟ್ಟಿ ಮೂಡಾರು, ಕೆ. ಶಿವಮೂರ್ತಿ, ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಡಾ. ರವಿರಾಜ್ ಉಡುಪ, ಶ್ರೀಕ್ಷೇತ್ರ ಧ.ಗ್ರಾ.ಯೋಜನೆ ಕಾಪು ಇದರ ಯೋಜನಾಧಿಕಾರಿ ಮಮತಾ ಶೆಟ್ಟಿ, ಶ್ರೀದೇವಳದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಶಿರ್ವ ವ್ಯ.ಸೇ.ಸ.ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ, ವಲದೂರು ವೆಲ್ಫೇರ್ ಎಸೋಸಿಯೇಶನ್ ಅಧ್ಯಕ್ಷ ಅಶೋಕ್ ಕುಮಾರ್ , ಬಂಟಕಲ್ಲು ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಬಂಟಕಲ್ಲು ಮಾಧವ ಕಾಮತ್, ಕೋಡು ಶಾಲಾ ಹಳೆವಿದ್ಯಾರ್ಥಿ ಸಂಘದ ಕೋಶಾಧಿಕಾರಿ ರಾಜೇಶ್ ಶೆಟ್ಟಿ, ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ.ಮಾಧವ ಐತಾಳ್, ಸಹಾಯಕ ವ್ಯವಸ್ಥಾಪಕ ಡಾ.ಪ್ರಶಾಂತ್ ಆರ್.ಜಿ, ವಿಸ್ತರಣಾಧಿಕಾರಿ ಅಬ್ದುಲ್ ಶಮೀರ್, ಪಂಜಿಮಾರು ಸಂಘದ ಉಪಾಧ್ಯಕ್ಷ ನಿತ್ಯಾನಂದ ನಾಯಕ್ ಪಾಲಮೆ ಉಪಸ್ಥಿತರಿದ್ದರು

ಪ್ರಸಾದ್ ಶೆಟ್ಟಿ ವಲದೂರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶ್ ಪೂಜಾರಿ ವಲದೂರು ವರದಿ ಓದಿ, ಕೊನೆಯಲ್ಲಿ ಧನ್ಯವಾದವಿತ್ತರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಯಶವಂತ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಪ್ರತಿಭಟನೆ
ಆಟ್ ಪಾಟ್ ಶಿಬಿರ ಕೊಡವ ಸಂಸ್ಕೃತಿ ಪ್ರತೀಕ: ಮಹೇಶ್ ನಾಚಯ್ಯ