ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಗೋಣಿಕೊಪ್ಪ ಕಾವೇರಿ ಕಾಲೇಜು ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಕ್ಯೂಎಸಿ ಸೆಲ್ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು.ಫೆಸ್ಟ್‌ನ ಎಲ್ಲ ವಿಭಾಗದ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಪೊನ್ನಂಪೇಟೆ ಹಳ್ಳಿಗಟ್ಟುವಿನ ಸಿಐಪಿಯು ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ಗೋಣಿಕೊಪ್ಪ ಕಾವೇರಿ ಪಿಯು ಕಾಲೇಜು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಸಿಐಪಿಯು ಕಾಲೇಜು ಐಟಿ ಮ್ಯಾನೇಜರ್ ಸ್ಪರ್ಧೆ ಮತ್ತು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಕ್ವಿಜ್, ಗೇಮಿಂಗ್ ಬಾಲಕ ಮತ್ತು ಬಾಲಕಿಯರ ವಿಭಾಗ, ಫೇಸ್ ಪೇಂಟಿಂಗ್, ಪೇಪರ್ ಪ್ರೆಸೆಂಟೇಶನ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿತು. ಗೋಣಿಕೊಪ್ಪ ಕಾವೇರಿ ಪಿಯು ಕಾಲೇಜು ಕ್ವಿಜ್, ಫೇಸ್ ಪೇಂಟಿಂಗ್, ಪೇಪರ್ ಪ್ರೆಸೆಂಟೇಷನ್‌ನಲ್ಲಿ ಪ್ರಥಮ, ಐಟಿ ಮ್ಯಾನೇಜರ್, ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ರನ್ನರ್ ಸ್ಥಾನ ಪಡೆದು ಕೊಂಡಿತು. ಲಯನ್ಸ್ ಪಿಯು ಕಾಲೇಜು ಗೇಮಿಂಗ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರೆ, ಬಾಲಕರ ವಿಭಾಗದಲ್ಲಿ ವಿದ್ಯಾನಿಕೇತನ ಪಿಯು ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿತು.ಪ್ರಾಂಶುಪಾಲ ಡಾ .ಮಾಳೇಟಿರ ಬಿ.ಕಾವೇರಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಪ್ರೊ.ಇಟ್ಟೀರ ಕೆ.ಬಿದ್ದಪ್ಪ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.
ಮುಖ್ಯ ಅತಿಥಿಗಳಾದ ಕಾವೇರಿ ಕಾಲೇಜು ಹಳೆ ವಿದ್ಯಾರ್ಥಿ, ಸಾಫ್ಟ್‌ವೇರ್ ಎಂಜಿನಿಯರ್ ಸೋಹನ್ ಪೂಜಾರಿ, ಕೋಡ್ ನಿಸ್ ಪ್ರೈವೇಟ್ ಲಿಮಿಟೆಡ್ ಸಿಇಒ ಪಿ.ಎಸ್.ಉತ್ತಪ್ಪ, ಉಪ ಪ್ರಾಂಶುಪಾಲೆ ಡಾ. ಎ.ಎಸ್. ಪೂವಮ್ಮ, ಐಕ್ಯೂಎಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ಕಾರ್ಯಕ್ರಮ ಸಂಚಾಲಕ ಯು.ಟಿ.ಪೆಮ್ಮಯ್ಯ, ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರಾದ ಎ.ಕೆ.ಕೃತಿ, ಕೆ.ಕೆ.ಬೋಜಮ್ಮ, ಎಸ್.ಎ. ತೀರ್ಥೇಶ್, ದೇಚಮ್ಮ, ಪಲ್ಲವಿ ಹಾಗೂ ರಂಜಿತ್ ಹಾಜರಿದ್ದರು. ಸಮಾರೋಪ ಸಮಾರಂಭದಲ್ಲಿ ಕಾವೇರಿ ಕಾಲೇಜು ಅಲುಮಿನೈ ಅಸೋಸಿಯೇಷನ್ ನಿರ್ದೇಶಕ ಹಾಗೂ ದಾನಿ ಪೊಕ್ಕಳಚಂಡ ಬಿ.ಪೂಣಚ್ಚ ಅವರನ್ನು ಸನ್ಮಾನಿಸಲಾಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಿಮಾಡ ಸುಬಾಷ್ ಸುಬ್ಬಯ್ಯ ಹಾಗೂ ಇನ್ನಿತರರು ವಿಜೇತರಿಗೆ ಬಹುಮಾನ ವಿತರಿಸಿದರು.