ನಾಪೋಕ್ಲು: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ‘ಆಜ್ಞಾ ಮುಹೂರ್ತ’ ಕಾರ್ಯಕ್ರಮ ನಡೆಯಿತು.
ಮದ್ಯ, ಮಾಂಸ ಸೇವನೆ ನಿಷೇಧ: ಜಾತ್ರೋತ್ಸವದ ಪವಿತ್ರತೆಯನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಸೋಮವಾರದಿಂದ ತಲಕಾವೇರಿ ಜಾತ್ರೆ ಮುಕ್ತಾಯಗೊಂಡು, ತೀರ್ಥೋದ್ಭವದ ಮರುದಿನದವರೆಗೆ ಭಾಗಮಂಡಲ ವ್ಯಾಪ್ತಿಯಲ್ಲಿ ಮದ್ಯ ಮತ್ತು ಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಭಕ್ತಾದಿಗಳು ಹಾಗೂ ಸಾರ್ವಜನಿಕರು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಯಾವುದೇ ರೀತಿಯ ವಿಘ್ನಗಳು ಸಂಭವಿಸದಿರಲೆಂದು ಪ್ರಾರ್ಥನೆ ಸಲ್ಲಿಸಿ ದೇವಾಲಯದ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ನಾಲ್ಕು ಗ್ರಾಮಗಳ ದೇವಾಲಯಗಳ ತಕ್ಕ ಮುಖ್ಯಸ್ಥರು, ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ ಹಾಗೂ ದೇವಾಲಯದ ಆಡಳಿತಾಧಿಕಾರಿ ಚಂದ್ರಶೇಖರ್, ಸಿಬ್ಬಂದಿ ಸೇರಿದಂತೆ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ:
ಅ. 15 (ಸಂಜೆ 6:03): ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸುವ ವಿಧಿ.