ಕನ್ನಡಪ್ರಭ ವಾರ್ತೆ ಗುಡಿಬಂಡೆ
ಈ ಸಂಬಂಧ ಎಲ್ಲೋಡು ಗ್ರಾಪಂ ಕಚೇರಿಯಲ್ಲಿ ನಡೆದ ಕಾಯಕ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ಗ್ರಾಮಗಳ ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ಕಾಯಕ ಗ್ರಾಮ ಯೋಜನೆಯನ್ನು ಜಾರಿಗೊಳಿಸಿದೆ ಎಂದರು.
ಆಡಳಿತಕ್ಕೆ ಚುರುಕು ಮುಟ್ಟಿಸಲುಹಿಂದುಳಿದ ಗ್ರಾಮ ಪಂಚಾಯತ್ ಗಳಿಗೆ ಚುರುಕು ಮುಟ್ಟಿಸಲು ಮತ್ತು ಅವುಗಳ ಅಭಿವೃದ್ಧಿಗೆ ವೇಗ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಯೋಜನೆಯನ್ನು ರೂಪಿಸಿದೆ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು. ಬದುಕಿನ ಸಾರ್ಥಕತೆ ಕಾಣಬಹುದು. ಈ ಮಹತ್ವದ ಕಾಯಕ ತತ್ವವನ್ನು ಅರ್ಥಪೂರ್ಣವಾಗಿಸಲು ನಮ್ಮ ಸರ್ಕಾರವು ಕಾಯಕ ಗ್ರಾಮ ಎಂಬ ಮಹತ್ವದ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಕಾಯಕ ಗ್ರಾಮ ಯೋಜನೆ ರಾಜ್ಯದ ಹಿಂದುಳಿದ ಗ್ರಾಮ ಪಂಚಾಯಿತಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ ಎಂದು ಸಿಇಒ ವಿವಿರಿಸಿದರು.ಮೂರು ವರ್ಷಗಳ ಅವಧಿ
ಈ ಯೋಜನೆಯಡಿ, ಹಿರಿಯ ಅಧಿಕಾರಿಗಳು ಹಿಂದುಳಿದ ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು, ಮುಂದಿನ ಮೂರು ವರ್ಷಗಳಲ್ಲಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾರೆ. ಈ ಯೋಜನೆಯು ಉತ್ತಮ ಆಡಳಿತ ಮತ್ತು ಗ್ರಾಮ ಪಂಚಾಯಿತಿಗಳ ಕಾರ್ಯಕ್ಷಮತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದರು.19 ಪ್ರಮುಖ ಉದ್ದೇಶಗಳು:
ಯೋಜನೆಯಡಿ ಒಟ್ಟು 19 ನಿರ್ದಿಷ್ಟ ಗುರಿಗಳನ್ನು ಹಾಕಿಕೊಳ್ಳಲಾಗಿದೆ. ಪ್ರಮುಖವಾಗಿ ಆಡಳಿತಾತ್ಮಕ ಸುಧಾರಣೆ, ಗ್ರಾಪಂ ಸಭೆಗಳ ಸಮರ್ಪಕ ನಿರ್ವಹಣೆ, ಕುಡಿಯುವ ನೀರು, ಬೀದಿ ದೀಪ ಮತ್ತು ಘನತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಲಾಗುವುದು. ಅಲ್ಲದೆ, ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರುವುದು, ಕೂಸಿನ ಮನೆ, ಗ್ರಂಥಾಲಯ, ನೈರ್ಮಲ್ಯ, ಎಸ್ಸಿ/ಎಸ್ಟಿ ಕಲ್ಯಾಣ ಹಾಗೂ ನರೇಗಾ ಯೋಜನೆಗಳ ಅನುಷ್ಠಾನದತ್ತ ಗಮನ ಹರಿಸಲಾಗುವುದು ಎಂದು ತಿಳಿಸಿದರು.ಬಳಿಕ ಎಲ್ಲೋಡು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಿಇಒ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷೆಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಸೌಲಭ್ಯಗಳು ಹಾಗೂ ಶೈಕ್ಷಣಿಕ ತಯಾರಿ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ನಾಗಮಣಿ, ಪಿಡಿಒ ಎ.ಆರ್. ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.