ಇಂದು ಕೆಡಿಸಿಸಿ ಬ್ಯಾಂಕ್‌ ಚುನಾವಣೆ, ಮತ ಎಣಿಕೆ

KannadaprabhaNewsNetwork |  
Published : Oct 25, 2025, 01:00 AM IST
ಪೊಟೋ24ಎಸ್.ಆರ್.ಎಸ್‌4 (ಕೆಡಿಸಿಸಿ ಬ್ಯಾಂಕ್‌) | Kannada Prabha

ಸಾರಾಂಶ

ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಶನಿವಾರ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆ ನಿರ್ಧಾರವಾಗಲಿದೆ. ನಗರದ ಎಪಿಎಂಸಿ ಆವಾರದಲ್ಲಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಅ. 25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ.

ಶಿರಸಿ: ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಶನಿವಾರ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆ ನಿರ್ಧಾರವಾಗಲಿದೆ.

ನಗರದ ಎಪಿಎಂಸಿ ಆವಾರದಲ್ಲಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಅ. 25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಆನಂತರ ಮತ ಎಣಿಕೆ ನಡೆದು ಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಮತದಾನವನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಮತದಾನ ನಡೆಯುವ ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮತಗಟ್ಟೆ ಸುತ್ತಲೂ 100 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.

ಆಡಳಿತ ಮಂಡಳಿಯ ಒಟ್ಟು 16 ನಿರ್ದೇಶಕ ಸ್ಥಾನದಲ್ಲಿ ಭಟ್ಕಳದಿಂದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಹೊನ್ನಾವರದಿಂದ ವಿ.ಕೆ. ವಿಶಾಲ ಹಾಗೂ ಅಂಕೋಲಾ ಬೀರಣ್ಣ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 13 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಒಟ್ಟು 30 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕೆಲ ಮತ ಕ್ಷೇತ್ರದಲ್ಲಿ ಸೀಮಿತ ಸಂಖ್ಯೆಯ ಮತದಾರರಿದ್ದು, ಅಭ್ಯರ್ಥಿಗಳು ಸಹಕಾರಿ ಮತದಾರರನ್ನು ಭೇಟಿಯಾಗಿ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಹಾಲು ಉತ್ಪಾದಕರ, ಕೂಲಿಕಾರರ, ಇತರ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಂಕರ ಹೆಗಡೆ ಜಂಬೇಕೊಪ್ಪ, ಯಲ್ಲಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಗೋಪಾಲಕೃಷ್ಣ ಗಾಂವ್ಕರ, ಶಾಸಕ ಹಾಗೂ ಹಾಲಿ ಅಧ್ಯಕ್ಷ ಶಿವರಾಮ ಹೆಬ್ಬಾರ, ಕಾರವಾರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಶಾಸಕ ಸತೀಶ ಸೈಲ್, ನಂದಕಿಶೋರ ನಾಯ್ಕ, ಪ್ರಕಾಶ ರಾಮ ಗುನಗಿ, ಶಿರಸಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಜಿ.ಆರ್. ಹೆಗಡೆ ಬೆಳ್ಳೇಕೇರಿ, ಮಹಾಬಲೇಶ್ವರ ಅನಂತ ಹೆಗಡೆ ಮೂಲೆದೇವಿತೋಟ, ಸಿದ್ದಾಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಬಾಲಚಂದ್ರ ಹೆಗಡೆ ಹಳದೋಟ, ರಾಘವೇಂದ್ರ ಶಾಸ್ತ್ರಿ ಬಿಳಗಿ, ಮುಂಡಗೋಡ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಎಲ್.ಟಿ. ಪಾಟೀಲ್, ಹಮ್ಮಣ್ಣ ಮಹಾಬಲ ನಾಯ್ಕ, ಹಳಿಯಾಳ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಎಸ್.ಎಲ್. ಘೋಟ್ನೆಕರ, ಸುಭಾಸ ಮಹಾಬಳೇಶ್ವರ ಕೊರ್ವೆಕರ, ಕುಮಟಾ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಗಜಾನನ ಪೈ, ರಾಜಗೋಪಾಲ ಅಡಿ ಗೋಕರ್ಣ, ಶ್ರೀಧರ ಭಾಗ್ವತ, ಜೋಯಿಡಾ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಕೃಷ್ಣ ದೇಸಾಯಿ, ಪುರುಷೋತ್ತಮ ಕಾಮತ, ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಗೋಪಾಲಕೃಷ್ಣ ವೈದ್ಯ ಮತ್ತಿಘಟ್ಟ, ರವಿ ಹೆಗಡೆ ಹುಳಗೋಳ, ಗ್ರಾಹಕರ ಸಹಕಾರಿ ಸಂಘಗಳು ಮತ್ತು ಸಂಸ್ಕರಣ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ತಿಮ್ಮಯ್ಯ ಹೆಗಡೆ ಉಲ್ಲಾಳ, ನಿರಂಜನ ಭಟ್ಟ ಹೊಸ್ತೋಟ, ಔದ್ಯೋಗಿಕ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ರಾಜೇಂದ್ರ ಹೆಗಡೆ, ವಿಶ್ವನಾಥ ಭಟ್ಟ, ಅರ್ಬನ್ ಬ್ಯಾಂಕ್ ಹಾಗೂ ಕೃಷಿಯೇತರ ಸಹಕಾರ ಸಂಘಗಳ ಮತಕ್ಷೇತ್ರದಿಂದ ಮೋಹನದಾಸ ನಾಯಕ, ಮೋಹನ ನಾಯಕ ಗೋಕರ್ಣ, ವಸಂತ ನಾಯಕ ಜಮಗೋಡ, ಸರಸ್ವತಿ ಎನ್. ರವಿ ಚುನಾವಣೆ ಎದುರಿಸುತ್ತಿದ್ದಾರೆ.ಬಿಗಿ ಪೊಲೀಸ್ ಬಂದೋಬಸ್ತ್: ಕೆಡಿಸಿಸಿ ಬ್ಯಾಂಕ್‌ ಚುನಾವಣೆ ಹಿನ್ನೆಲೆಯಲ್ಲಿ ಡಿಎಸ್‌ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ ನೇತೃತ್ವದಲ್ಲಿ ಪೊಲೀಸ್ ಬೀಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಡಿಎಸ್ಪಿ, ಇಬ್ಬರು ಇನ್‌ಸ್ಪೆಕ್ಟರ್‌, 6 ಪಿಎಸ್ಐ, ಕರ್ನಾಟಕ ಸಶಸ್ತ್ರ ಮೀಸಲು ಪಡೆ, 2 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಉಪವಿಭಾಗದ 80 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

PREV

Recommended Stories

ನ.14ರಿಂದ 20ರಿಂದ ರಾಜ್ಯದಲ್ಲಿ ಸಹಕಾರ ಸಪ್ತಾಹ
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ