-
ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಕಲ್ಲು ಸಾಗರ ಬೀದಿಯ ಶ್ರಿ ಬಸವೇಶ್ವರ ದೇವಾಲಯದ ಹಿಂಭಾಗದಲ್ಲಿರುವ ಹಿರೇಮಠದ ಕೇದಾರೇಶ್ವರ ಗುರುಭವನ, ಕೇದಾರೇಶ್ವರ ಗುರುನಿವಾಸದ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ಏಪ್ರಿಲ್ 3 ಮತ್ತು 4ರಂದು ನಡೆಯಲಿದೆ ಎಂದು ಶ್ರೀ ಮಠದ ಡಾ. ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.ಏ.3ರಂದು ಬೆಳಗ್ಗೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೆಂಡದಾರ್ಚನೆ ಮತ್ತು ಬೆಳಗ್ಗೆ 11.30ಕ್ಕೆ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ನಡೆಯಲಿದೆ. ಏ.4ರಂದು ಬೆಳಗ್ಗೆ 11.30ಕ್ಕೆ ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಕೇದಾರೇಶ್ವರ ನಿವಾಸ ಉದ್ಘಾಟನೆಯನ್ನು ಶಾಸಕ ಬಸವರಾಜ ವಿ. ಶಿವಗಂಗಾ ನೆರವೇರಿಸುವರು. ಕೇದಾರೇಶ್ವರ ಗುರುಭವನದ ಉದ್ಘಾಟನೆಯನ್ನು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ವಿ.ಪ. ಸದಸ್ಯರಾದ ಡಿ.ಎಸ್. ಅರುಣ್, ಡಾ.ಧನಂಜಯ ಸರ್ಜಿ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್, ವಡ್ನಾಳ್ ರಾಜಣ್ಣ, ಮಾಜಿ ವಿ.ಪ. ಸದಸ್ಯ ಆರ್.ಪ್ರಸನ್ನಕುಮಾರ್, ರುದ್ರೇಗೌಡ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್, ತುಮ್ ಕೋಸ್ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ಮಾಜಿ ಅಧ್ಯಕ್ಷ ಆರ್.ಎಂ.ರವಿ, ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್, ತಿಪ್ಪೇಸ್ವಾಮಿ, ದೇವರಮನೆ ಶಿವಕುಮಾರ್, ತಹಸೀಲ್ದಾರ್ ಎನ್.ಜೆ. ನಾಗರಾಜ್, ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ, ಜಿಪಂ ಮಾಜಿ ಅಧ್ಯಕ್ಷೆ ಮಂಜುಳ ಟಿ.ವಿ. ರಾಜು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
-30ಕೆಸಿಎನ್‌ಜಿ3: ಹಿರೇಮಠದ ಶ್ರೀಗಳು