ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ

KannadaprabhaNewsNetwork |  
Published : Apr 01, 2024, 12:58 AM ISTUpdated : Apr 01, 2024, 09:23 AM IST
ಸಿಕೆಬಿ-1 ಚುನಾವಣೆ  ಸಂಬಂಧ ನಡೆದ ಅಧಿಕಾರಿಗಳ  ಸಭೆಯಲ್ಲಿ ವೆಚ್ಚ  ವೀಕ್ಷಕ ದೆಬಾಶಿಶ್ ಮಜುಮ್ ದಾರ್ ಮಾತನಾಡಿದರು. | Kannada Prabha

ಸಾರಾಂಶ

ಸಾರ್ವಜನಿಕರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ವೆಚ್ಚಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಕರೆ ಮಾಡಿ ತಿಳಿಸಬಹುದು

 ಚಿಕ್ಕಬಳ್ಳಾಪುರ :  ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ ಸೂಕ್ತ ಸಮಯಕ್ಕೆ ವರದಿ ನೀಡುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕ ದೆಬಾಶಿಶ್ ಮಜುಮ್‌ದಾರ್ ಅಧಿಕಾರಿಗಳಿಗೆ ಸೂಚಿಸಿದರು. 

ನಗರ ಹೊರವಲಯದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚುನಾವಣೆ ಸಂಬಂಧ ನಡೆದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಕೋನದಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು. ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ದಾಖಲೆ ಇಲ್ಲದೆ ವಶಪಡಿಸಿಕೊಂಡ ನಗದು ಹಾಗೂ ಇತರೆ ವಸ್ತುಗಳ ಬಗ್ಗೆ ಪ್ರತಿದಿನ ವರದಿ ಸಲ್ಲಿಸಬೇಕೆಂದರು.

ಮದ್ಯ, ಹಣ ಸಾಗಣೆ ಮೇಲೆ ಕಣ್ಣಿಡಿ

ಅಕ್ರಮ ಮದ್ಯ, ನಗದು ಸಾಗಾಟದ ಮೇಲೆ ಹದ್ದಿನ ಕಣ್ಣಿಟ್ಟು ನಿಗ್ರಹಿಸಬೇಕು.ಸುದ್ದಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹಿರಾತು, ಪೇಯ್ಡ್ ನ್ಯೂಸ್ ಮೇಲೆ ನಿಗಾ ಇಡಬೇಕು. ಸಾರ್ವಜನಿಕ ಸಭೆ ಸಮಾರಂಭಗಳು ಅನುಮತಿ ಪ್ರಕಾರ ನಡೆಯಬೇಕು. ಈ ಬಗ್ಗೆ ಹೆಚ್ಚಿನ ನಿಗಾ ಇಡಲು ಸಂಬಂಧ ಪಟ್ಟ ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಅಧಿಕಾರಿಗಳು ಶಾಡೋ ರಿಜಿಸ್ಟರ್ ನಿರ್ವಹಿಸಬೇಕು ಎಂದು ಹೇಳಿದರು.

ಸಾರ್ವಜನಿಕರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ವೆಚ್ಚಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ನನ್ನ ದೂರವಾಣಿ ಸಂಖ್ಯೆ 9481911030 ಗೆ ಕರೆ ಮಾಡಿ ತಿಳಿಸಬಹುದು ಅಥವಾ ನಾನು ವಾಸ್ತವ್ಯ ಹೂಡಿರುವ ನಗರದ ಹೊರವಲಯದಲ್ಲಿರುವ ಚದಲಪುರ ಪರಿವೀಕ್ಷಣಾ ಮಂದಿರದಲ್ಲಿ ಸಂಪರ್ಕಿಸಿ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಸಿದ್ಧತೆ ಕುರಿತು ಮಾಹಿತಿ

ಸಭೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಕ್ಷೇತ್ರದ ಚುನಾವಣಾ ಸಿದ್ಧತೆಗಳ ಕುರಿತು ಪಿಪಿಟಿ ಮೂಲಕ ವಿವರಿಸಿದರು.ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್. ಅನುರಾಧ, ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್. ನಾಗೇಶ್, ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೆಸ್ವಾಮಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ