ಕನ್ನಡಪ್ರಭ ವಾರ್ತೆ ಬೆಳಗಾವಿ
ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ದೇವರು, ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಾನಕವಾಗಿ ಮಾತನಾಡುತ್ತಾರೆ. ಆದರೆ, ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದು ಕಿಡಿಕಾರಿದರು.ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗುತ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ, ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ, ಅಂಗಡಿ ಹಾಕಿಕೊಟ್ಟಿದ್ದಾರೆ. ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥ ನೂರಾರು ಉದಾಹರಣೆಗಳಿವೆ ಎಂದು ಸಮರ್ಥಿಸಿಕೊಂಡರು.
ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ಮಾಡುತ್ತೇವೆ. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.