ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತಂದ ಜೆಸಿಬಿ ಪಕ್ಷಗಳನ್ನು ದೂರ ಇಡಿ: ರವಿ ಕೃಷ್ಣಾರೆಡ್ಡಿ

KannadaprabhaNewsNetwork |  
Published : Mar 02, 2024, 01:52 AM IST
ಕೆಆರ್‌ಎಸ್‌ ಪಕ್ಷ ಹಮ್ಮಿಕೊಂಡಿರುವ ಕರ್ನಾಟಕಕ್ಕಾಗಿ ನಾವು ಬೈಕ್‌ ಜಾಥಾ ಚಿಕ್ಕಮಗಳೂರಿಗೆ ಶುಕ್ರವಾರ ಆಗಮಿಸಿದ ಸಂದರ್ಭದಲ್ಲಿ  ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರವಿ ಕೃಷ್ಣಾರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಭ್ರಷ್ಟರು, ಅಪ್ರಾಮಾಣಿಕರು, ಸ್ವಜನಪಕ್ಷಪಾತಿಗಳು, ಅನೈತಿಕ ನಡವಳಿಕೆ ಉಳ್ಳವರು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ಮತ್ತು ಅವರ ಮಕ್ಕಳನ್ನು ರಾಜಕೀಯ ನಾಯಕರೆಂದು ಒಪ್ಪಿಕೊಳ್ಳಬಾರದು ಎಂದು ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕರೆ ನೀಡಿದ್ದಾರೆ.

ಕರ್ನಾಟಕಕ್ಕಾಗಿ ನಾವು ಬೈಕ್ ಜಾಥಾ । ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ನಡೆದ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭ್ರಷ್ಟರು, ಅಪ್ರಾಮಾಣಿಕರು, ಸ್ವಜನಪಕ್ಷಪಾತಿಗಳು, ಅನೈತಿಕ ನಡವಳಿಕೆ ಉಳ್ಳವರು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ಮತ್ತು ಅವರ ಮಕ್ಕಳನ್ನು ರಾಜಕೀಯ ನಾಯಕರೆಂದು ಒಪ್ಪಿಕೊಳ್ಳಬಾರದು ಎಂದು ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕರೆ ನೀಡಿದ್ದಾರೆ.ಫೆ.19 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಿಂದ ಹೊರಟ ಕರ್ನಾಟಕಕ್ಕಾಗಿ ನಾವು ಬೈಕ್ ಜಾಥಾ ಶುಕ್ರವಾರ ಚಿಕ್ಕಮಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಇಲ್ಲಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಜನಪರ ಕಾಳಜಿಯ, ಸ್ವಚ್ಛ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗೆ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಬೆಂಬಲಿಸಬೇಕೆಂದು ಮನವಿ ಮಾಡಿದರು.ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ, ತಮ್ಮ ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತಿರಸ್ಕರಿಸಬೇಕೆಂದು ಹೇಳಿದರು.ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ರಾಜ್ಯದ ಜನರನ್ನು ಕೋರಲು ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕರ್ನಾಟಕಕ್ಕಾಗಿ ನಾವು ಬೈಕ್ ಜಾಥಾ ಹಮ್ಮಿಕೊಂಡಿದೆ ಎಂದು ತಿಳಿಸಿದರು.ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್‌.ಎಚ್‌. ಲಿಂಗೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್, ರಾಜ್ಯ ಕಾರ್ಯದರ್ಶಿ ನರಸಿಂಹಮೂರ್ತಿ, ಮಂಜುನಾಥ್, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಕೃಷ್ಣ, ಬಿ. ಜಿ ಕುಂಬಾರ್, ನಂದ ರೆಡ್ಡಿ ಭಾಗವಹಿಸಿದ್ದರು.ಪೋಟೋ ಫೈಲ್‌ ನೇಮ್‌ 1 ಕೆಸಿಕೆಎಂ 1ಕೆಆರ್‌ಎಸ್‌ ಪಕ್ಷ ಹಮ್ಮಿಕೊಂಡ ಕರ್ನಾಟಕಕ್ಕಾಗಿ ನಾವು ಬೈಕ್‌ ಜಾಥಾ ಚಿಕ್ಕಮಗಳೂರಿಗೆ ಶುಕ್ರವಾರ ಆಗಮಿಸಿದ ಸಂದರ್ಭದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರವಿ ಕೃಷ್ಣಾರೆಡ್ಡಿ ಮಾತನಾಡಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...