ಕನ್ನಡಪ್ರಭ ವಾರ್ತೆ ಹೊನ್ನಾಳಿ
ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಶಾಸಕ ಡಿ.ಜಿ. ಶಾಂತನಗೌಡರಿಗೆ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹಾಗೂ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಕಳೆದ ಐದು ವರ್ಷಗಳ ಹಿಂದೆ ವ್ಯಾಪಿಸಿದ್ದ ಕೊರೋನಾ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಆಸರೆಯಾಗಿದ್ದ ಗೋಮಾಳದ ಜಮೀನನ್ನು ಹೊನ್ನಾಳಿಯ ನಿವೇಶನ ರಹಿತರಿಗೆ ಮಂಜೂರು ಮಾಡಿರುವುದು ಅತ್ಯಂತ ಖಂಡನೀಯ ಎಂದರು. ಸರ್ಕಾರಿ ಜಮೀನನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಗಳಿಗೆ ಬಳಕೆ ಮಾಡಬಾರದು ಎಂಬ ಸರ್ಕಾರದ ಆದೇಶ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿ ಗೋಮಾಳದ ಜಮೀನನ್ನು ನಿವೇಶನರಹಿತರಿಗೆ ಮಂಜೂರು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರು.ಗ್ರಾಮದ ರೈತ ಮುಖಂಡ ಕರಿಬಸಪ್ಪ ಮಾತನಾಡಿ, ಇಲ್ಲಿ ಬೆಳೆದಿರುವ ಗಿಡಮರಗಳನ್ನು ಕಡಿದು ನಿವೇಶನ ಮಾಡಲು ಅನುಮತಿ ಕೊಡುವ ಅಧಿಕಾರಿಗಳ ವಿರುದ್ಧ, ಮರಗಳನ್ನು ಕಡಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಗ್ರಾಮದ ಯುವ ಮುಖಂಡ ಎಚ್.ಕೆ.ನರಸಿಂಹಮೂರ್ತಿ ಮಾತನಾಡಿ, ಸಾರ್ವಜನಿಕರು ಕೃಷಿ ಚಟುವಟಿಕೆಗಳಿಗೆ ಒಂದು ಗಿಡಮರ ಕಡಿದರೆ ಕೇಸ್ ಹಾಕಿ ಜೈಲಿಗೆ ಕಳಿಸುತ್ತಾರೆ. ಆದರೆ ಇಲ್ಲಿ ಸರ್ಕಾರಿ ಅಧಿಕಾರಿಗಳೇ ಕಾನೂನು ಉಲ್ಲಂಘನೆ ಮಾಡಿ, ಅನುಮತಿ ಕೊಡುವುದಕ್ಕೆ ಮುಂದಾಗಿರುವುದು ಅಕ್ಷಮ್ಯ ಎಂದರು.ಆದ್ದರಿಂದ ಉಪವಿಭಾಗಾಧಿಕಾರಿಗಳು, ಶಾಸಕ ಡಿ.ಜಿ. ಶಾಂತನಗೌಡ ಅವರು, ಗ್ರಾಮಸ್ಥರ ಅನುಕೂಲಕ್ಕಾಗಿ ಇರುವ ಈ ಗೋಮಾಳವನ್ನು ಯಥಾಸ್ಥಿತಿಯಲ್ಲಿ ಗ್ರಾಮದ ಜನತೆಗೆ ಬಿಡಬೇಕು, ನಿವೇಶನ ಮಾಡುವ ಕುರಿತು ಯಾವುದೇ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು ಎಂದರು.
ಗ್ರಾಪಂ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಡಿ.ಬಿ.ಶ್ರೀನಾಥ್, ರೈತಸಂಘದ ತಾಲೂಕು ಅಧ್ಯಕ್ಷ ಕೆ.ಸಿ.ಬಸಪ್ಪ, ಬೆಳಗುತ್ತಿಯ ಉಮೇಶ್, ಹನಗವಾಡಿಯ ರಮೇಶ್, ಎಸ್.ಕೆ.ಕರಿಯಪ್ಪ, ಅನಂತಯ್ಯ, ರಂಗನಾಥ್, ರುದ್ರಪ್ಪ, ಎಸ್.ಆರ್.ಹನುಮಂತಪ್ಪ, ಚನ್ನಬಸಪ್ಪ, ಗ್ರಾಮಸ್ಥರು ಹಾಜರಿದ್ದರು.