ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಎಲೆಕೆರೆ ಹ್ಯಾಂಡ್‌ಪೋಸ್ಟ್‌ನಲ್ಲಿರುವ ರುತ್ವಿ ಅಕ್ಷಯ್ ಕನ್ವೆನಷನ್ ಹಾಲ್‌ನಲ್ಲಿ ನಡೆದ ಜೆಡಿಎಸ್, ಕಾರ್‍ಯಕರ್ತರು ಮುಖಂಡರು ಸಭೆಯಲ್ಲಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪಕ್ಷದ ಕೆಲವು ಕಾರ್‍ಯಕರ್ತರಲ್ಲಿ ವೈಮನಸ್ಸಿನಿಂದ ನಾವು ಕ್ಷೇತ್ರವನ್ನು ಕಳೆದುಕೊಂಡಿದ್ದೇವೆ ಎಂದರು.
ಈ ನೋವುಗಳನ್ನು ಅನುಭವಿಸಿದ್ದೀರಾ. ಅದಕ್ಕೆ ಉತ್ತರವಾಗಿ ಲೋಕಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅತ್ಯಧಿಕ ಮತ ಕೊಟ್ಟು ಗೆಲ್ಲಿಸಿಕೊಟ್ಟಿದ್ದೀರಿ. ಹಾಗೆಯೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಸಹ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಪಕ್ಷವನ್ನು ಅಧಿಕಾರದ ಗದ್ದುಗೆ ಏರಿಸುವ ಕೆಲಸ ಮಾಡಬೇಕು ಎಂದರು.ಮನ್ಮುಲ್ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ. ಜತೆಗೆ ಪಿಡಿಎಲ್ ಬ್ಯಾಂಕ್ ಚುನಾವಣೆಯೂ ಸಹ ಶೀಘ್ರದಲ್ಲಿಯೇ ನಡೆಯಲಿದೆ. ಮುಂದಿನ ಜನವರಿಯಿಂದ ಮಾರ್ಚ್ ತಿಂಗಳಲ್ಲಿ ಬಹುತೇಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಪಕ್ಷದ ಕಾರ್‍ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು. ಪಕ್ಷದಲ್ಲಿರುವ ಒಡಕುಗಳನ್ನು ಗ್ರಾಮ ಮಟ್ಟದಲ್ಲಿಯೇ ಸರಿಪಡಿಸಿಕೊಂಡು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದರು.
ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ಮಾತನಾಡಿ, ಮನ್ಮುಲ್ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಬಯಸುವ ಆಕಾಂಕ್ಷಿತರು ಮೊದಲ ಅರ್ಜಿ ಸಲ್ಲಿಸಿ ನಂತರ ಪಕ್ಷದ ವೇದಿಕೆಯಲ್ಲಿ ಕುಳಿತು ಚರ್ಚಿಸಿ ಚುನಾವಣೆಗೆ ಎದುರಿಸುವ ಸಾಮರ್ಥ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಕ್ಷದ ಕಾರ್‍ಯಕರ್ತರು ಮುಖಂಡರು ಗ್ರಾಮಾಂತರ ಪ್ರದೇಶದಲ್ಲಿ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಬಲವರ್ಧನೆಗೊಳಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ಚಲುವರಾಜು, ಗುರುಸ್ವಾಮಿ, ಕ್ಯಾತನಹಳ್ಳಿ ಪ್ರವೀಣ್‌ಗವಿಗೌಡ, ತಾಪಂ ಮಾಜಿ ಅಧ್ಯಕ್ಷ ಎಂ.ಸಿ.ಯಶವಂತ್‌ಕುಮಾರ್, ಮಾಜಿ ಸದಸ್ಯ ಶ್ರೀನಿವಾಸ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪ್ರಕಾಶ್, ನಂಜೇಗೌಡ, ರುತ್ವಿಅಕ್ಷಯ್ ಕನ್ವೆನಷನ್ ಮಾಲೀಕ ಅಕ್ಷಯ್ ಸೇರಿದಂತೆ ಹಲವರು ಹಾಜರಿದ್ದರು.