ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ: ಶಾಸಕ ಎಚ್.ಟಿ.ಮಂಜು

KannadaprabhaNewsNetwork |  
Published : Sep 21, 2026, 01:45 AM IST
20ಕೆಎಂಎನ್ ಡಿ34 | Kannada Prabha

ಸಾರಾಂಶ

ಕೆ.ಆರ್.ಪೇಟೆ ಪಟ್ಟಣದಲ್ಲಿ ಪ್ರತಿದಿನ 15 ಟನ್ ಕಸ ಸಂಗ್ರಹವಾಗುತ್ತದೆ. ಇಷ್ಟು ಪ್ರಮಾಣದ ಕಸವನ್ನು ಕೇವಲ 15 ರಿಂದ 20 ಪೌರಕಾರ್ಮಿಕರು ವಿಲೇವಾರಿ ಮಾಡುವುದು ಬಹಳ ಕಷ್ಟ. ಆದ್ದರಿಂದ ಸಾರ್ವಜನಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ಪುರಸಭೆ ವಾಹನಕ್ಕೆ ನೀಡಿದರೆ ವಿಲೇವಾರಿ ಸುಲಭವಾಗುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ನಗರ ವಾಸಿಗಳು ತಮ್ಮ ಮನೆ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಅತ್ಯವಶ್ಯಕ ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.

ಪಟ್ಟಣ ಪುರಸಭಾ ಕಾರ್ಯಲಯದ ವತಿಯಿಂದ ಗಣಪತಿ ಪಾರ್ಕಿನಲ್ಲಿ ಆಯೋಜಿಸಿದ್ದ ಸ್ವಚ್ಛತೋತ್ಸವವನ್ನು ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಸ ಗುಡಿಸಿ ಚಾಲನೆ ನೀಡಿ ಮಾತನಾಡಿದರು.

ಪಟ್ಟಣದ ನಿವಾಸಿಗಳು ತಮ್ಮ ಮನೆಯಲ್ಲಿ ದೊರೆಯುವ ಕಸವನ್ನು ಇದುವರೆವಿಗೂ ಹಸಿಕಸ ಮತ್ತು ಒಣಕಸಗಳಾಗಿ ವಿಂಗಡಿಸಿ ಕಸ ನೀಡುತ್ತಿದ್ದರು. ಆದರೆ, ಅದೇ ಕಸವನ್ನು ನಾಲ್ಕು ಭಾಗಗಳಾಗಿ ವಿಭಾಗಿಸಿ ವಿಲೇವಾರಿ ಮಾಡುವ ಮೂಲಕ ಪಟ್ಟಣದ ಸ್ವಚ್ಚತೆಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಪಟ್ಟಣದಲ್ಲಿ ಪ್ರತಿದಿನ 15 ಟನ್ ಕಸ ಸಂಗ್ರಹವಾಗುತ್ತದೆ. ಇಷ್ಟು ಪ್ರಮಾಣದ ಕಸವನ್ನು ಕೇವಲ 15 ರಿಂದ 20 ಪೌರಕಾರ್ಮಿಕರು ವಿಲೇವಾರಿ ಮಾಡುವುದು ಬಹಳ ಕಷ್ಟ. ಆದ್ದರಿಂದ ಸಾರ್ವಜನಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ಪುರಸಭೆ ವಾಹನಕ್ಕೆ ನೀಡಿದರೆ ವಿಲೇವಾರಿ ಸುಲಭವಾಗುತ್ತದೆ. ಆ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡಿದಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಚಂದ್ರಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಮೋಹನ್, ಯುವ ಜನತಾದಳದ ಅಧ್ಯಕ್ಷ ಮಹದೇವೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಲದೇವ್, ಪುರಸಭಾ ಮಾಜಿ ಸದಸ್ಯರಾದ ಹೇಮಂತ್ ಕುಮಾರ್, ಗಿರೀಶ್, ಪ್ರೇಂಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಅಶೋಕ್, ಆರೋಗ್ಯಾಧಿಕಾರಿ ಅಶೋಕ್ ಸೇರಿದಂತೆ ನೂರಾರು ಸಾರ್ವಜನಿಕರು ಹಾಜರಿದ್ದರು.ಜಾನಪದ ಕಲಾಮೇಳಕ್ಕೆ ಸೆ.23ರಂದು ನೋಂದಣಿಮಂಡ್ಯ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಸೆ.23 ರಿಂದ 25ರವರೆಗೆ ರಾಜ್ಯಮಟ್ಟದ 47ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾಮೇಳ, ಚುಂಚಶ್ರೀ ಪ್ರಶಸ್ತಿ ಪ್ರದಾನ ಹಾಗೂ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥಶ್ರೀಗಳ ವಾರ್ಷಿಕ ಪಟ್ಟಾಭಿಷೇಕ ಹಾಗೂ ಗುರು ಸಂಸ್ಮರಣೋತ್ಸವ ಸಮಾರಂಭ ನಡೆಯಲಿದೆ. ಜಾನಪದ ಕಲಾಮೇಳದಲ್ಲಿ ಭಾಗವಹಿಸುವ ಕಲಾವಿದರು ಸೆ.23ರ ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆವರೆಗೂ ನೋಂದಾಯಿಸಿಕೊಳ್ಳಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಸರ್ಕಾರ ರೈತರಿಗೆ ಪರಿಹಾರ ಬಿಡುಗಡೆ ಮಾಡಲಿ’
10000 ಎಂಎಎಚ್‌ ಬ್ಯಾಟರಿಯ ರೆಡ್‌ಮಿ 17 ಬಿಡುಗಡೆ