ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರ ಸರ್ಕಾರ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿತ್ತು. ಬೆಲೆ ಏರಿಕೆ ನಿಯಂತ್ರಣ ಮಾಡುವ ಚಾಲೆಂಜ್ ಡಿ.ಕೆ. ಶಿವಕುಮಾರ್ ಸರ್ಕಾರಕ್ಕಿದೆ. ರಾಜ್ಯದಲ್ಲಿ ರೈತರು ಟ್ರಾನ್ಸ್‌ಫಾರ್ಮರ್ ಹಾಕಿಸಿಕೊಳ್ಳುವುದಕ್ಕೆ ₹3 ಲಕ್ಷ ದುಡ್ಡು ಕಟ್ಟಬೇಕಾದ ಅನಿವಾರ್ಯತೆ ಇದೆ. ಭ್ರಷ್ಟಾಚಾರ ನಿರೀಕ್ಷೆಗೂ ಮೀರಿ ಬೆಳೆದಿದೆ ಎಂದರು.
ಮೂಡ, ವಾಲ್ಮೀಕಿ ಹಗರಣಗಳು ಮಾತ್ರವಲ್ಲ ಎಲ್ಲ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ಶೇ. 60ರಷ್ಟು ದಾಟಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದವರೇ ಆರೋಪ ಮಾಡುತ್ತಿದ್ದಾರೆ. ಬೆಂಗಳೂರು ಒಳ್ಳೆಯ ಕಾರಣಕ್ಕೆ ಹೆಸರಾಗುವುದಕ್ಕಿಂತ ಹೆಚ್ಚಾಗಿ ಕೆಟ್ಟ ಕಾರಣಕ್ಕೆ ಹೆಸರಾಗುತ್ತಿದೆ. ಗುಂಡಿ ಬಿದ್ದ ರಸ್ತೆಗಳು ಬೆಂಗಳೂರನ್ನು ಬೆತ್ತಲೆಗೊಳಿಸುತ್ತಿವೆ. ಒಂದೇ ಒಂದು ಮಳೆ ಬೆಂಗಳೂರಿನ ನಿಜ ಸ್ವರೂಪ ಬಯಲು ಮಾಡಿದೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಚಾಲೆಂಜ್ ಡಿ.ಕೆ.ಶಿವಕುಮಾರ್ ಅವರ ಮೇಲಿದೆ ಎಂದರು.ರಾಜ್ಯದಲ್ಲಿ ಸಮಸ್ಯೆಗಳು ಹೆಚ್ಚಿರುವಾಗ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಷ್ಟು ಘೋಷಣೆಗಳನ್ನು ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನಾವು ಸ್ವಾಗತಿಸುತ್ತೇವೆ. ಆದರೆ ಗ್ರಾಮಾಂತರ ಪ್ರದೇಶಗಳಿಗೆ ಬಸ್ ಗಳೇ ಕಡಿತವಾಗಿವೆ. ಇರುವ ಬಸ್ ಗಳು ತಳ್ಳೋ ಮಾಡಲ್ ಗಳಾಗಿವೆ. ಸರ್ಕಾರಿ ಬಸ್ಸುಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಹೊಸ ಬಸ್‌ಗಳ ಖರೀದಿ ನಡೆದಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಶತ 30- 40 ರಷ್ಟು ಹಾಲಿ ಇದ್ದ ರೂಟ್ ಗಳನ್ನು ಕಡಿತಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಎಲ್ಲಾ ಸವಾಲುಗಳ ನಡುವೆ ಡಿ.ಕೆ.ಶಿವಕುಮಾರ್ ತಮ್ಮ ಹಳೆಯ ಅನುಭವದ ಜೊತೆಗೆ ಹೊಸ ಹುಮ್ಮಸ್ಸಿನೊಂದಿಗೆ ಕೆಲಸ ಮಾಡುವಂತಾಗಬೇಕು. ಒಳ್ಳೆಯ ಕೆಲಸ ಮಾಡಲಿ ಎಂದು ನಾವು ನಿರೀಕ್ಷೆ ಮಾಡುತ್ತೇವೆ. ಒಳ್ಳೆಯ ಕೆಲಸಕ್ಕೆ ನಾವು ಬೆಂಬಲ ನೀಡುತ್ತೇವೆ. ವಿರೋಧ ಮಾಡಬೇಕು ಎಂಬ ಕಾರಣ ಕ್ಕಾಗಿಯೇ ಯಾವುದನ್ನು ವಿರೋಧ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
-- ಬಾಕ್ಸ್
ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪಟ ವಿಸ್ತರಣೆ ವೇಳೆ ಸಚಿವ ಸ್ಥಾನದ ಅವಕಾಶ ಸಿಗಬಹುದೇ ಎಂದು ನೋಡೋಣ. ಜಿಲ್ಲೆಯಲ್ಲಿಯೂ ಅರ್ಹರು ಹಾಗೂ ಅನುಭವಿಗಳು ಇದ್ದಾರೆ. ಚಿಕ್ಕಮಗಳೂರಿನಲ್ಲಿ ಅರ್ಹ ಅನುಭವಿಗಳು ಇಲ್ಲ ಎನ್ನುವ ತೀರ್ಮಾನಕ್ಕೆ ಕಾಂಗ್ರೆಸ್ ನಾಯಕರು ಮಾಡಬಾರದು. ಚಿಕ್ಕಮಗಳೂರು ಜಿಲ್ಲೆಗೆ ಮಂತ್ರಿ ಸ್ಥಾನ ಕೊಡಬೇಕು. ಕೊಟ್ಟರೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.(ಸಿ.ಟಿ.ರವಿ ಫೋಟೋ ಬಳಸಿ)