ನವಲಗುಂದ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಕೆಂಪೇಗೌಡ 516ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ಸುಧೀರ್ ಸಾಹುಕಾರ್ ಪೂಜೆ ಸಲ್ಲಿಸಿದರು.
ಇದೆ ವೇಳೆ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಕೆಂಪೇಗೌಡರ ಜಯಂತಿ ನಿಮಿತ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು.
ತಾಪಂ ಇಒ ಭಾಗ್ಯಶ್ರೀ ಜಹಗೀರದಾರ, ಸಿಡಿಪಿಒ ಗಾಯತ್ರಿ ಪಾಟೀಲ್, ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಬಿ. ಮಲ್ಲಾಡ, ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ, ಕೃಷ್ಣ ಆರೇರ, ನಾಗರಾಜ್ ಕರಿಸಕ್ರಣ್ಣವರ, ರತ್ನಾ ಸಂಗಟಿ, ನಂದಿನಿ ಹಾದಿಮನಿ, ಶಿವಯೋಗಿ ಜಂಗಣ್ಣವರ ಇತರರು ಪಾಲ್ಗೊಂಡಿದ್ದರು.