ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ದುಡಿದ ಮಹಾನ್ ವ್ಯಕ್ತಿ. ಅವರ ದೂರದೃಷ್ಟಿ ಹೊಂದಿ ಕಟ್ಟಿದ ಬೆಂಗಳೂರು ಇಂದು ವಿಶ್ವದ ಗಮನ ಸೆಳೆಯುತ್ತಿದೆ. ಶೇ.೬೫ರಷ್ಟು ತೆರಿಗೆ ಸಂಗ್ರಹವಾಗುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕಾರಣವಾಗಿದೆ. ಕೆರೆಕಟ್ಟೆಗಳನ್ನು ಕಟ್ಟಿ, ಶಿಕ್ಷಣ, ವ್ಯಾಪಾರಕ್ಕೆ ಆದ್ಯತೆ ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ಕೆಂಪೇಗೌಡರು ಕಾರಣವಾಗಿದ್ದಾರೆ ಎಂದರು.ತಹಸೀಲ್ದಾರ್ ಶಂಕರಪ್ಪ ಮಾತನಾಡಿ, ವಿಜಯನಗರದ ಸಾಮಂತ ಪ್ರಭುವಾಗಿ ಕೆಂಪೇಗೌಡರು ಸುಸಜ್ಜಿತವಾಗಿ ಬೆಂಗಳೂರು ಕಟ್ಟಿದ್ದಾರೆ. ಕಟ್ಟಿದ ನಗರದಲ್ಲಿ ವಾಸಿಸುವ ಜನ, ಪ್ರಾಣಿ, ಪಕ್ಷಿಗಳು, ಕೃಷಿಗೆ ನೀರಿನ ಕೊರತೆ ಕಾಡದಂತೆ ಕೆರೆಕಟ್ಟೆಗಳನ್ನು ವೈಜ್ಞಾನಿಕವಾಗಿ ಕಟ್ಟಿ ಇಂದಿಗೂ ನವಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಆದರ್ಶ ತತ್ವಗಳನ್ನು ಪಾಲಿಸುವ ಮೂಲಕ ಅವರ ಹಾದಿಯಲ್ಲಿ ಎಲ್ಲರೂ ಸಾಗೋಣವೆಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್. ಎನ್. ಲೋಕೇಶ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಆನಂದ್ ಕಾಳೆನಹಳ್ಳಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್. ಪಿ. ಪ್ರಕಾಶ್‌ಗೌಡ, ಕೆಡಿಪಿ ಸದಸ್ಯ ಮಹೇಶ್ ಕಬ್ಬಾಳು, ಪರಿಸರ ಪ್ರೇಮಿ ಚ.ನಾ. ಅಶೋಕ್, ಟಿಎಪಿಸಿಎಂಎಸ್‌ನ ಅಧ್ಯಕ್ಷ ವೆಂಕಟೇಶಮೂರ್ತಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ವಿ. ಜಯಪಾಲ್, ಚನ್ನರಾಯಪಟ್ಟಣ ಉಪವಿಭಾಗ ಪೊಲೀಸ್ ಉಪಅಧೀಕ್ಷಕ ಎನ್.ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ. ಆರ್.ಹರೀಶ್ ಉಪಸ್ಥಿತರಿದ್ದರು.