ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ರಚನೆ

KannadaprabhaNewsNetwork |  
Published : Jun 17, 2025, 12:07 AM ISTUpdated : Jun 17, 2025, 01:33 PM IST
3 | Kannada Prabha

ಸಾರಾಂಶ

ಒಕ್ಕಲಿಗರ ಸಂಘದ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಚಾರ ವಾಹನಕ್ಕೆ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸೋಮವಾರ ಚಾಲನೆ ನೀಡಿದರು

 ಮೈಸೂರು :  ಕುವೆಂಪುನಗರದಲ್ಲಿರುವ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದ ಮುಂಭಾಗದಲ್ಲಿ ಒಕ್ಕಲಿಗರ ಸಂಘದ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಚಾರ ವಾಹನಕ್ಕೆ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸೋಮವಾರ ಚಾಲನೆ ನೀಡಿದರು 

 ನಂತರ ಶ್ರೀಗಳು ಮಾತನಾಡಿ, ಬೆಂಗಳೂರಿನಲ್ಲಿ ಜಾತಿ, ಮತ, ಪಂಥ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು 1ನೇ ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ ಎಂದು ಹೇಳಿದರು.

ಕೆಂಪೇಗೌಡರ ಜಯಂತಿ ಪಕ್ಷಾತೀತ ಹಾಗೂ ಜಾತ್ಯತೀತ ಕಾರ್ಯಕ್ರಮವಾಗಿದೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಹನೀಯರ ಆದರ್ಶಗಳನ್ನು ಯುವಜನರಿಗೆ ತಿಳಿಸಿಕೊಡಲು ಅವರ ಜಯಂತಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಶಾಸಕ ಹಾಗೂ ಮಾಜಿ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ದೇಶ ವಿದೇಶದಲ್ಲಿ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಆಚರಿಸಬೇಕೆಂಬ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡು, ಅವರಿಗೆ ಗೌರವ ಸಲ್ಲಿಸುವ ಕೆಲಸ ಮಾಡುತ್ತಿದೆ. ಅವರ ಸ್ಮರಣೆ ವಿಚಾರಧಾರೆಗಳು ಪ್ರತಿಯೊಬ್ಬರಿಗೂ ವ್ಯಾಪಿಸಬೇಕು ಎಂದರು.

ಕೆಂಪೇಗೌಡರು ಈ ರಾಜ್ಯ ಕಂಡ ಅಪ್ರತಿಮ ನಾಯಕ ಅವರ ಆದರ್ಶಗಳು ಇಂದಿನ ಯುವಜನರಿಗೆ ಮಾರ್ಗದರ್ಶನ ಆಗಲಿವೆ. ಇಂತಹ ಮಹಾನ್ ನಾಯಕರ ನೆನಪಿಗಾಗಿ ಒಟ್ಟಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡುತ್ತಿರುವುದು ವಿಶೇಷ ಎಂದು ಅವರು ಹೇಳಿದರು.

 ಶಾಸಕರಾದ ಕೆ. ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಶಾಂತ್ ಗೌಡ, ಪ್ರೇಮಾ ಶಂಕರೇಗೌಡ, ಮುಖಂಡರಾದ ಮೋಹನ್ ಕುಮಾರ್ ಗೌಡ, ಲಕ್ಷ್ಮೀದೇವಿ, ಮರಿಸ್ವಾಮಿ, ಮಹದೇವಗೌಡ, ಕುಮಾರ್, ಶಂಕರ್, ನಾಗಣ್ಣ, ಬಾಲು, ರಾಜಣ್ಣ, ವಿಕ್ರಾಂತ್ ದೇವೆಗೌಡ, ಮೋದಾಮಣಿ, ರವಿ, ಶೇಖರ್, ಸುಶೀಲಾ ನಂಜಪ್ಪ, ಲೋಕೇಶ್, ರವೀಂದ್ರ, ಮೋನಿಷಾ, ನೇಹಾ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''