27ರಂದು ಕೆಂಪೇಗೌಡ ಜಯಂತಿ

KannadaprabhaNewsNetwork |  
Published : Jun 16, 2024, 01:48 AM IST
ಸಿಕೆಬಿ-4 ಕೆಂಪೇಗೌಡ ಜಯಂತಿ  ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಮಾತನಾಡಿದರು | Kannada Prabha

ಸಾರಾಂಶ

ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ 20 ವಿದ್ಯಾರ್ಥಿಗಳಿಗೆ, ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜೂ. 27 ರಂದು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸಂಭ್ರಮ ಸಡಗರದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜೂ. 27 ರಂದು ನಗರದ ಮರುಳಸಿದ್ದೇಶ್ವರ ಸ್ವಾಮಿ ದೇವಾಲಯದಿಂದ (ಎಂ.ಜಿ.ರಸ್ತೆ) ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ಪಲ್ಲಕ್ಕಿ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ.

20 ವಿದ್ಯಾರ್ಥಿಗಳಿಗೆ ಪುರಸ್ಕಾರ

ನಂತರ ಶ್ರೀ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಆ ನಂತರ ವೇದಿಕೆ ಕಾರ್ಯಕ್ರಮಗಳು ಜರುಗಲಿವೆ. ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ 20 ವಿದ್ಯಾರ್ಥಿಗಳಿಗೆ, ಪ್ರಗತಿಪರ ರೈತರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.

ಕಾರ್ಯಭಾರ ಹಂಚಿಕೆಗೆ ಸೂಚನೆ

ಈ ಕಾರ್ಯಕ್ರಮಕ್ಕೆ ಸಾಧಕರ ಆಯ್ಕೆ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಇಲಾಖಾವಾರು ಕಾರ್ಯಭಾರ ಹಂಚಿಕೆ ಮಾಡಿ ಜವಾಬ್ದಾರಿ ವಹಿಸಿದರು. ಜಯಂತ್ಯೋತ್ಸವಕ್ಕೆ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಂಬಂಧ ಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀಡಿದರು. ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೋ.ಕೋಡಿರಂಗಪ್ಪ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಈಶ್ವರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮನಿಷಾ, ಸಮುದಾಯದ ಮುಖಂಡರಾದ ಬಿ.ಎನ್. ಚನ್ನಪ್ಪರೆಡ್ಡಿ, ಚದಲಪುರ ನಾರಾಯಣಸ್ವಾಮಿ, ಬಿ.ಕೆ.ಮಂಜುನಾಥ್, ಪ್ರಕಾಶ್.ಎಂ, ನಾರಾಯಣಸ್ವಾಮಿ, ಯಲುವಳ್ಳಿ ಸೊಣ್ಣೇಗೌಡ, ಒಕ್ಕಲಿಗ ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ