ಕೆಂಪೇಗೌಡರ ಜೀವನ ಎಲ್ಲರಿಗೂ ಆದರ್ಶ

KannadaprabhaNewsNetwork |  
Published : Jun 28, 2025, 12:18 AM IST
27ಎಚ್ಎಸ್ಎನ್10 : ನಾಡಪ್ರಭು  ಕೆಂಪೇಗೌಡರ 516 ನೇ ಜಯಂತಿ ಅಂಗವಾಗಿ  ಪ್ರತಿಮೆಗೆ ಶಾಸಕರಿಂದ ಮಾಲಾರ್ಪಣೆ ಮಾಡಲಾಯಿತು. | Kannada Prabha

ಸಾರಾಂಶ

ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಜೀವನ ಮತ್ತು ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸುವಲ್ಲಿ ಕೆಂಪೇಗೌಡರು ಪ್ರಮುಖ ಪಾತ್ರ ವಹಿಸಿದ್ದರು. ಅಂದು ಅವರು ನಿರ್ಮಿಸಿದ ಬೆಂಗಳೂರು ನಗರ ಇಂದು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ಇದರಿಂದಾಗಿ ಕೆಂಪೇಗೌಡ ಜಯಂತಿಯನ್ನು ಎಲ್ಲಾ ವರ್ಗದ ಜನರು ಆಚರಿಸಬೇಕು. ಇದೇ 30ರ ಸೋಮವಾರ ಪಟ್ಟಣದಲ್ಲಿ ಅದ್ಧೂರಿಯಾಗಿ ಕೆಂಪೇಗೌಡ ಜಯಂತಿಯನ್ನು ಶ್ರೀ ಶಂಭುನಾಥ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಆಚರಿಸಲಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ನಗರದ ಕೆಂಪೇಗೌಡ ವೃತ್ತದಲ್ಲಿರುವ ಪ್ರತಿಮೆಗೆ ಶಾಸಕ ಎಚ್ ಕೆ ಸುರೇಶ್ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು.

ನಂತರ ಮಾತನಾಡಿ, ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಜೀವನ ಮತ್ತು ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸುವಲ್ಲಿ ಕೆಂಪೇಗೌಡರು ಪ್ರಮುಖ ಪಾತ್ರ ವಹಿಸಿದ್ದರು. ಅಂದು ಅವರು ನಿರ್ಮಿಸಿದ ಬೆಂಗಳೂರು ನಗರ ಇಂದು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ಇದರಿಂದಾಗಿ ಕೆಂಪೇಗೌಡ ಜಯಂತಿಯನ್ನು ಎಲ್ಲಾ ವರ್ಗದ ಜನರು ಆಚರಿಸಬೇಕು. ಇದೇ 30ರ ಸೋಮವಾರ ಪಟ್ಟಣದಲ್ಲಿ ಅದ್ಧೂರಿಯಾಗಿ ಕೆಂಪೇಗೌಡ ಜಯಂತಿಯನ್ನು ಶ್ರೀ ಶಂಭುನಾಥ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಆಚರಿಸಲಾಗುತ್ತಿದೆ ಎಂದರು.ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಎ ನಾಗರಾಜ್ ಮಾತನಾಡಿ, ತಾಲೂಕು ಆಡಳಿತ ವತಿಯಿಂದ ನಡೆಯುತ್ತಿರುವ ಕೆಂಪೇಗೌಡ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸುತ್ತಿದ್ದು, ನಮ್ಮ ಕುಲಬಾಂಧವರು ಕೂಡ ಈ ಕಾರ್ಯಕ್ರಮಕ್ಕೆ ಕೈಜೋಡಿಸುತ್ತಿದ್ದು, ಸೋಮವಾರ ನಡೆಯುವ ಅದ್ಧೂರಿ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಜಾತಿಭೇದ ಇಲ್ಲದೆ ಎಲ್ಲಾ ಜನಾಂಗದವರು ಸೇರಿ ಆಚರಣೆ ಮಾಡಲಾಗುತ್ತಿದ್ದು ಸಮಾಜದ ಎಲ್ಲಾ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಎಂ ಮಮತಾ ಪುರಸಭಾ ಮುಖ್ಯ ಅಧಿಕಾರಿ ಬಸವರಾಜ್ ಶಿಗ್ಗಾವಿ, ಪುರಸಭಾ ಮಾಜಿ ಅಧ್ಯಕ್ಷ ಆರ್‌ ಅಶೋಕ್, ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಮದನ್ ಬಳ್ಳೂರು, ಪುರಸಭಾ ಆರೋಗ್ಯಾಧಿಕಾರಿ ಲೋಹಿತ್, ಕಸಾಪ ಅಧ್ಯಕ್ಷ ಮಾನ ಮಂಜೇಗೌಡ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಎಂಜೆ ನಿಶಾಂತ್, ವಕೀಲರ ಸಂಘದ ಅಧ್ಯಕ್ಷ ಸಿ ಎಂ ಪೃಥ್ವಿ , ಗಣೇಶ್, ಲೋಹಿತ್, ಸೇರಿದಂತೆ ಇನ್ನಿತರರು ಇದ್ದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ