ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘಗಳ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರದ ಸಂಸ್ಥಾಪಕರು. ಅತ್ಯಂತ ಮುಂದಾಲೋಚನೆಯಿಂದ ನಗರವನ್ನು ನಿರ್ಮಿಸಿದರು. 16ನೇ ಶತಮಾನದಲ್ಲೇ ಬೆಂಗಳೂರಿನಲ್ಲಿ ಅನೇಕ ಕೆರೆಗಳು, ಮಾರುಕಟ್ಟೆಗಳನ್ನು ನಿರ್ಮಿಸಿದ್ದರು. ಅನೇಕ ಸಾಮಾಜಿಕ ಪಿಡುಗಗಳ ವಿರುದ್ಧ ಕೆಲಸ ಮಾಡಿದ್ದರು. ಬೆಂಗಳೂರು ನಗರ ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ರಾಜ್ಯದ ಬೆನ್ನೆಲುಬಾಗಿದೆ. ಕೆಂಪೇಗೌಡರು ನಾಡು ಕಟ್ಟುವಲ್ಲಿ ನಮಗೆಲ್ಲ ಸ್ಫೂರ್ತಿದಾಯಕರಾಗಿದ್ದಾರೆ ಎಂದರು.ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮ ಕೇವಲ ಭಾಷಣಕ್ಕೆ ಸೀಮಿತ ಆಗಬಾರದು. ಎಲ್ಲರೂ ಅವರ ಜೀವನ ಚರಿತ್ರೆಯನ್ನು ಓದಿ ತಿಳಿದುಕೊಳ್ಳಬೇಕು ಎಂದರು.
ಎಲ್ಲ ವರ್ಗದವರಿಗೂ ಸಮಾನ ಹಕ್ಕು, ನ್ಯಾಯವನ್ನು ಒದಗಿಸಿದ ಮಹಾನ್ ನಾಯಕ ಕೆಂಪೇಗೌಡರು. ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನು ನಿರ್ಮಾಣ ಮಾಡಿ ದ್ದಾರೆ. ಕೆರೆಗಳು, ಮರಗಿಡಗಳು, ಮಾರುಕಟ್ಟೆ ಸೇರಿದಂತೆ ಬೆಂಗಳೂರಿನಲ್ಲಿ ಉತ್ತಮ ವಾತಾವರಣಕ್ಕೆ ಕಾರಣ ಅವರ ಕೊಡುಗೆ ಎಂದು ಸ್ಮರಿಸಿದರು.
ಬೆಂಗಳೂರಿನಲ್ಲಿ ನೀರಿನ ವ್ಯವಸ್ಥೆಗೆಗಾಗಿ ನೂರಾರು ಕೆರೆಗಳು, ವ್ಯಾಪಾರ ಮಾರುಕಟ್ಟೆಗಳಾದ ಚಿಕ್ಕಪೇಟೆ, ದೊಡ್ಡಪೇಟೆ, ಬಂಗಾರಪೇಟೆ, ಕಾಟನ್ ಪೇಟೆ, ದೇವಾಲಯಗಳು, ಸೇರಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ನಗರವನ್ನು ನಿರ್ಮಾಣ ಮಾಡಿದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಎಎಸ್‍ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಜಿ.ಆದಿಮೂರ್ತಿ, ತಾಲೂಕು ಒಕ್ಕಲಿಗರ ಸಂಘ ಅಧ್ಯಕ್ಷ ಎ.ಎಸ್.ಚಂದ್ರಕಾಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮೇಶ್, ಸಮಾಜದ ಮುಖಂಡರು ಹಾಜರಿದ್ದರು.