- ಚಿಕ್ಕಮಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ
ಇಂದು ಸುಭದ್ರವಾದ ಬೆಂಗಳೂರು ನಿರ್ಮಾಣದ ಜೊತೆಗೆ ಜನಪರ ಕಾರ್ಯಕ್ರಮ ಕೈಗೊಂಡರು. ಬಾಲ್ಯದಲ್ಲಿ ಚುರುಕಾಗಿಯೇ ಇದ್ದ ಅವರು ಗುರುಕುಲದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ರಾಜನೀತಿ, ಆರ್ಥಿಕ ತಿಳುವಳಿಕೆ, ಕುಸ್ತಿ, ಯುದ್ಧ ಕಲೆಗಳನ್ನು ಕಲಿತಿದ್ದರು. ವಿಜಯನಗರದ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಅವರು ಎಲ್ಲ ವೈಭವ ಗಳನ್ನು ಪುನರ್ ಪ್ರತಿಷ್ಠಾಪಿಸುವ ಬಯಕೆ ಹೊಂದಿದ್ದರು. ರಾಜಧಾನಿ ಕಟ್ಟಿದ ನಂತರ ಅಲ್ಲಿ ನಾಲ್ಕು ಮಹಾದ್ವಾರಗಳನ್ನು ರಚಿಸಿದರು ಎಂದು ಹೇಳಿದರು.
ವ್ಯಾಪಾರಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಟ್ಟು ಅವರ ವೃತ್ತಿಗನುಸಾರವಾಗಿ ಅಕ್ಕಿಪೇಟೆ, ರಾಗಿಪೇಟೆ, ಕುಂಬಾರಪೇಟೆ, ಬಳೆಪೇಟೆ ಹೀಗೆ ಅನೇಕ ಪೇಟೆಗಳನ್ನು ನಿರ್ಮಿಸಿದರು ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ನಾಡಪ್ರಭು ಕೆಂಪೇಗೌಡರು ಉತ್ತಮ ಕೃಷಿ ಚಟುವಟಿಕೆಗಳಿಗೆ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಲವಾರು ಕೆರೆಗಳನ್ನು ನಿರ್ಮಿಸಿದರು. ಧಾರ್ಮಿಕತೆಗೆ ಪ್ರತೀಕವಾಗಿ ದೇವಸ್ಥಾನಗಳನ್ನು ಕಟ್ಟಿಸಿದರಲ್ಲದೇ ವಿವಿಧ ಉದ್ಯಾನವನ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬೆಂಗಳೂರನ್ನು ಜಾಗತಿಕವಾಗಿ ಗುರುತಿಸಲು ಕೆಂಪೇಗೌಡರ ಕೊಡುಗೆ ಅವಿಸ್ಮರಣೀ. ಅವರ ಆದರ್ಶಗಳು ಇಂದು ನಮಗೆಲ್ಲರಿಗೂ ದಾರಿ ದೀಪವಾಗಿವೆ ಎಂದು ಹೇಳಿದರು.
ಅಪ್ರತಿಮ ಕರ್ತೃತ್ವ ಶಕ್ತಿ ಹೊಂದಿದ್ದ ಧೀಮಂತ ನಾಯಕರಾದ ಅವರು, ಪ್ರಾಚೀನ ಕಾಲದಿಂದಲೂ ವಾಣಿಜ್ಯ ಪಥಗಳು ಸಾಗುತ್ತಿದ್ದ ಭೌಗೋಳಿಕವಾಗಿ ಆಯಕಟ್ಟಿನ ಪ್ರದೇಶದಲ್ಲಿ ಬೆಂಗಳೂರು ನಿರ್ಮಿಸಿದರು. ಕ್ರಿ.ಶ. 1537 ಲ್ಲಿ ಕೆಂಪೇಗೌಡರು ’ದೇವರಾಯಪಟ್ಟಣ’ ಎಂಬ ಹೆಸರಿನಲ್ಲಿ ಉತ್ಪಾದನೆ ಮತ್ತು ವಾಣಿಜ್ಯ ಕೇಂದ್ರವಾಗಿ ರೂಪಿಸಿದ ತಮ್ಮ ಹೊಸ ರಾಜಧಾನಿ ಬೆಂಗಳೂರು ನಗರವನ್ನು ಕಟ್ಟಿ, ಅದಕ್ಕೆ ನಾಲ್ಕು ದಿಕ್ಕಿನಲ್ಲಿ ನಾಲ್ಕು ಗುಡಿ ಗೋಪುರ ನಿರ್ಮಿಸಿದರು. ನಗರದ ಸುತ್ತ ಕಂದಕ ವುಳ್ಳ ಮಣ್ಣಿನ ಕೋಟೆ ನಿರ್ಮಿಸಿ, ಅದರ ಎಲ್ಲ ದಿಕ್ಕಿನಲ್ಲಿ ಕೆರೆಗಳನ್ನು ಕಟ್ಟಿಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಿದರು. ಕುಶಲಕರ್ಮಿಗಳಿಗೆ ಅಗತ್ಯವಾದ ವೈವಿಧ್ಯಮಯ ವಸ್ತುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಿದ್ದು ನಗರದ ಅಭಿವೃದ್ಧಿಗೆ ಕಾರಣವಾಯಿತು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಆಶಾಕಿರಣ ಅಂಧ ಮಕ್ಕಳ ಶಾಲೆ ಅಧ್ಯಕ್ಷ ಡಾ.ಜೆ.ಪಿ. ಕೃಷ್ಣೇಗೌಡ, ನಗರಸಭೆ ಪ್ರಭಾರಿ ಅಧ್ಯಕ್ಷೆ ಅನು ಮಧುಕರ್, ಕುವೆಂಪು ಕಲಾ ಸೇವಾ ಸಂಘದ ಅಧ್ಯಕ್ಷ ಕೆ. ಮೋಹನ್, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ತಹಸೀಲ್ದಾರ್ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
27 ಕೆಸಿಕೆಎಂ 4ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಉದ್ಘಾಟಿಸಿದರು.