ಕೆಂಪೇಗೌಡರು ಒಂದು ಸಮುದಾಯ, ಧರ್ಮಕ್ಕೆ ಸೀಮಿತರಲ್ಲ: ಡಾ.ಬಿ.ಜೆ.ವಿಜಯ್ ಕುಮಾರ್

KannadaprabhaNewsNetwork |  
Published : Jun 27, 2025, 12:49 AM IST
17 | Kannada Prabha

ಸಾರಾಂಶ

ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಮತ್ತು ಧರ್ಮಕ್ಕೆ ಮಾತ್ರ ಸೀಮಿತವಾಗದೆ, ಇಡೀ ಸಮಾಜವನ್ನು ಅಭಿವೃದ್ಧಿ ದೃಷ್ಟಿಯಿಂದ ಮುನ್ನಡೆಸಿದವರು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ತಿಳಿಸಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಗುರುವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ. ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕ ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು ಎಂದರು.

ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಮಾತನಾಡಿ, ಇಂದಿನ ಬೆಂಗಳೂರು ದೇಶ ವಿದೇಶಿಗರಿಗೆ ರಸ್ತೆ ಬದಿಯಿಂದ ಮಾಲ್ ವರೆಗೂ ಆಶ್ರಯ ನೀಡಿದೆ ಎಂದರೆ ಸುಮಾರು 500 ವರ್ಷಗಳ ಹಿಂದೆ ಬೆಂಗಳೂರನ್ನು ನಿರ್ಮಿಸಿದ ಕೆಂಪೆಗೌಡರು ಶ್ರಮ ಹಾಗೂ ಕೊಡುಗೆ ಅಪಾರ. ಒಂದು ಕೆರೆಯಿಂದ ಇನ್ನೊಂದು ಕೆರೆಗೆ ನೀರು ಹರಿಯುವಂತೆ ರಾಜಕಾಲುವೆಗಳನ್ನು ನಿರ್ಮಿಸಿದ್ದರು. ಕನ್ನಡ ಭಾಷಾ ಮತ್ತು ಸ್ವದೇಶಿ ಉತ್ಪನ್ನ ರೈತಾಪಿ ಪ್ರಧಾನಕ್ಕೆ ಪ್ರೋತ್ಸಾಹ ನೀಡಿದ್ದವರು ಕೆಂಪೆಗೌಡರು ಎಂದರು.

ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಮಾತನಾಡಿ, ಕೆಂಪೇಗೌಡರ ಜಯಂತಿಯಲ್ಲಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಭಾಗವಹಿಸಬೇಕು ಎಂದರು.

ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಮುಖಂಡರಾದ ನಟರಾಜ್, ರಾಘವೇಂದ್ರ, ಚಂದ್ರು, ರಾಮಚಂದ್ರ, ನಂಜುಂಡಸ್ವಾಮಿ, ರವಿಚಂದ್ರ, ರಾಹುಲ್, ಮೋಹನ್, ನಿತೀಶ್ ಕುಮಾರ್, ಎಸ್.ಎನ್. ರಾಜೇಶ್, ಹರೀಶ್ ನಾಯ್ಡು, ಮೋಹನ್ ಕುಮಾರ್ ಮೊದಲಾದವರು ಇದ್ದರು.

ನಾರಾಯಣ ಸ್ವಾಮೀಜಿ ಅವರ ಸೇವೆ ಅವಿಸ್ಮರಣೀಯ

ಕನ್ನಡಪ್ರಭ ವಾರ್ತೆ ಮೈಸೂರು

ದೇಶ ವಿದೇಶಗಳಲ್ಲಿ ಸಂಶೋಧನೆ ನಡೆಸಿ, ಗೋಗ್ರಾಸಗಳ ಉತ್ಪನ್ನದಿಂದ ಕ್ಯಾನ್ಸರ್‌ ನಂತಹ ಖಾಯಿಲೆ ಗುಣಪಡಿಸಿರುವ ನಾರಾಯಣ ಸ್ವಾಮೀಜಿ ಅವರ ಸೇವೆ ಇಂದಿಗೂ ಅವಿಸ್ಮರಣೀಯ ಎಂದು ದಾವಣಗೆರೆಯ ಆದರ್ಶ ಯೋಗ ಪ್ರತಿಷ್ಠಾನದ ಸಂಸ್ಥಾಪಕ ರಾಘವೇಂದ್ರ ಅಭಿಪ್ರಾಯಪಟ್ಟರು.

ನಗರದ ಯೋಗಾಂಬರ ಸಭಾಂಗಣದಲ್ಲಿ ಗೋಸಾಯಿ ಸೇವಾ ಟ್ರಸ್ಟ್‌ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾರಾಯಣ ಸ್ವಾಮೀಜಿಯವರು ಗೋ ಸೇವೆ ಮಾಡುತ್ತಾ ಯೋಗಶಾಸ್ತ್ರ ಮತ್ತು ಆಯುರ್ವೇದ ಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. ಹಲವು ಯೋಗ ಕೃತಿಗಳು, ಸಿಡಿ, ಡಿವಿಡಿಗಳನ್ನು ಲೋಕಾರ್ಪಣೆ ಗೊಳಿಸಿದ್ದರು. ಕ್ಯಾನ್ಸರ್‌, ಮಧುಮೇಹ, ರಕ್ತದೊತ್ತಡ, ಹೃದ್ರೋಗ ಮುಂತಾದ ದೀರ್ಘ ಕಾಯಿಲೆಗಳಿಗೆ ಯಾವುದೇ ರಾಸಾಯನಿಕ ಔಷಧಿ ಬೆರೆಸದೆ ಗೋ ಉತ್ಪನ್ನಗಳಿಂದ ಔಷಧಿ ತಯಾರಿಸಿ ಉಚಿತವಾಗಿ ನೀಡಿ ಶ್ರೀ ಸಾಮ್ಯಾರಿಗೆ, ನೊಂದವರ ಬಾಳಿಗೆ ದಾರಿ ದೀಪವಾಗಿದ್ದಾಗಿ ಹೇಳಿದರು.

ಟ್ರಸ್ಟಿ ನಾಗಾರಜಪ್ಪ, ಕಾರ್ಯದರ್ಶಿ ರಾಘವೇಂದ್ರ ಭಟ್‌, ಉಪಾಧ್ಯಕ್ಷೆ ಸಂಧ್ಯಾ, ರವಿಕುಮಾರ್‌, ಎಸ್‌. ಸಂವೇದಿತಾ, ವಿ.ಕೆ. ರಾಹುಲ್‌, ಚೇತನ್‌ ಇದ್ದರು.

PREV

Recommended Stories

79 ವರ್ಷಗಳ ನಂತ್ರ ಅಥಣಿಗೆ ಸರ್ಕಾರಿ ಪ್ರೌಢಶಾಲೆ!
ಪ್ರಜಾಪ್ರಭುತ್ವ ಉಳಿವಿಗೆ ಹೋರಾಟ ಅನಿವಾರ್ಯ