ಕನ್ನಡಪ್ರಭ ವಾರ್ತೆ ನವದೆಹಲಿ
ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ, ಒತ್ತುವರಿ ತೆರವಿಗೆ ಸೂಚಿಸಿತ್ತು. ಆದರೆ, ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಿರಲಿಲ್ಲ.
ಇದನ್ನು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣ ಸಂಬಂಧ ಕುಮಾರಸ್ವಾಮಿಯವರ ತನಿಖೆಗೆ ಸಮ್ಮತಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ರಾಮನಗರ ತಹಶೀಲ್ದಾರ್ ಅವರು ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿದ್ದರು. ಇದನ್ನು ಪ್ರಶ್ನಿಸಿ, ಎಚ್ಡಿಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪಂಕಜ್ ಮಿಥಲ್ ನೇತೃತ್ವದ ದ್ವಿಸದಸ್ಯ ಪೀಠ, ಅವರಿಗೆ ಎರಡು ವಾರಗಳ ಕಾಲ ರಿಲೀಫ್ ನೀಡಿದೆ.