ಕೆಎಫ್‌ಡಿ: ತೀವ್ರ ನಿಗಾವಹಿಸಲು ಜಿಲ್ಲಾಧಿಕಾರಿ ಸೂಚನೆ

KannadaprabhaNewsNetwork |  
Published : Feb 15, 2024, 01:17 AM IST
ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿಯ ತುರ್ತು ಸಭೆ ಡಿಸಿ ಮೀನಾ ನಾಗರಾಜ್‌  ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಿಇಓ ಡಾ. ಗೋಪಾಲಕೃಷ್ಣ, ಡಿಎಚ್‌ಓ ಡಾ. ಅಶ್ವತ್‌ಬಾಬು, ಡಾ. ಭರತ್‌ ಇದ್ದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಆ ಸ್ಥಳಗಳಲ್ಲಿ ತೀವ್ರ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ತುರ್ತು ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಆ ಸ್ಥಳಗಳಲ್ಲಿ ತೀವ್ರ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ತುರ್ತು ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಡು, ತೋಟಗಳಲ್ಲಿ ಕೆಲಸ ಮಾಡುವವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಬಹಳ ಅಗತ್ಯವಾದದ್ದು, ಒಣಗಿದ ಎಲೆಗಳಲ್ಲಿ ಸೋಂಕಿತ ಉಣ್ಣೆಗಳನ್ನು ಹೊಂದಿರಬಹುದಾದರಿಂದ ಕಾಡಿನಿಂದ ತಂದು ಮನೆಗಳ ಸಮೀಪ ಹಾಕಬಾರದು. ಮಂಗ ಸತ್ತ ಪ್ರದೇಶಗಳಿಗೆ ಭೇಟಿ ನೀಡಬಾರದು. ಪ್ರವಾಸಿಗರು ಚಾರಣ ಸಮಯದಲ್ಲಿ ಉಣ್ಣೆ ಕಡಿತವನ್ನು ನಿರ್ಲಕ್ಷ್ಯ ವಹಿಸುವಂತಿಲ್ಲ ಇಂತಹ ಸ್ಥಳಗಳನ್ನು ಗುರುತಿಸಿ ಸೈನ್ ಬೋರ್ಡುಗಳನ್ನು ಹಾಕಿ ಜನರಿಗೆ ತಿಳುವಳಿಕೆ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಮಂಗನ ಖಾಯಿಲೆ ಕಂಡು ಬಂದಿರುವ ಪ್ರದೇಶಗಳಲ್ಲಿ ಈ ಕಾಯಿಲೆ ನಿವಾರಣೆ ದೀಪಾ ಎಂಬ ತೈಲವನ್ನು ಆ ಭಾಗದ ಎಲ್ಲ ಕುಟುಂಬಗಳಿಗೆ ವಿತರಿಸಲಾಗಿದೆ ಹಾಗೂ ಜಾಗೃತಿಯನ್ನು ಸಹ ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಆರೋಗ್ಯ ಪಶು, ಅರಣ್ಯ ಇಲಾಖೆ ಮತ್ತು ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕಾಯಿಲೆ ಹತೋಟಿ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅದೇ ರೀತಿ ತಂಬಾಕು ಉತ್ಪನ್ನಗಳ ಬಳಕೆಯನ್ನು ಸಂಪೂರ್ಣ ಹತೋಟಿಗೆ ತರುವ ದೃಷ್ಠಿಯಿಂದ ಎಲ್ಲ ತಾಲೂಕುಗಳಲ್ಲಿ ಜಾಗೃತಿ ದಳದಿಂದ ತಪಾಸಣೆ ಮಾಡಿ ತಪ್ಪಿಸ್ಥರ ವಿರುದ್ದ ಕ್ರಮಕೈಗೊಳ್ಳಬೇಕು ಇದರ ದುಷ್ಪರಿಣಾಮದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಎಂದು ಹೇಳಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ. ಭರತ್‌ ಸೇರಿದಂತೆ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು. 14 ಕೆಸಿಕೆಎಂ 4ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ತುರ್ತು ಸಭೆ ಡಿಸಿ ಮೀನಾ ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಿಇಒ ಡಾ. ಗೋಪಾಲಕೃಷ್ಣ, ಡಿಎಚ್‌ಒ ಡಾ. ಅಶ್ವತ್‌ಬಾಬು, ಡಾ. ಭರತ್‌ ಇದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು