ಖಾದಿ ಉತ್ಸವ-2025ಗೆ ತೆರೆ: ₹ 1.50 ಕೋಟಿ ವಹಿವಾಟು

KannadaprabhaNewsNetwork |  
Published : Sep 04, 2025, 01:01 AM IST
3ಕೆಪಿಎಲ್28 “ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮಾರಾಟ “ಖಾದಿ ಉತ್ಸವ | Kannada Prabha

ಸಾರಾಂಶ

ಕೊಪ್ಪಳದಲ್ಲಿ 10 ದಿನ ನಡೆದ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿದ್ದು ಬರೋಬ್ಬರಿ ₹ 1.50 ಕೋಟಿ ವಹಿವಾಟು ನಡೆದಿದೆ.

ಕೊಪ್ಪಳ:

ನಗರದಲ್ಲಿ 10 ದಿನ ನಡೆದ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿದ್ದು ಬರೋಬ್ಬರಿ ₹ 1.50 ಕೋಟಿ ವಹಿವಾಟು ನಡೆದಿದೆ.

ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ “ಖಾದಿ ಉತ್ಸವ-2025” ಆ. 24ರಿಂದ ಸೆ. 2ರ ವರೆಗೆ ನಗರದ ಹೊಸಪೇಟೆ ರಸ್ತೆಯ ನಗರಸಭೆ ಎದುರಿನ ಶಾದಿ ಮಹಲ್‌ನಲ್ಲಿ ನಡೆಯಿತು. ಈ ವಸ್ತು ಪ್ರದರ್ಶನದಲ್ಲಿ 52 ಮಳಿಗೆ ನಿರ್ಮಿಸಲಾಗಿತ್ತು. 10 ದಿನಗಳಿಗೆ ₹ 66.88 ಲಕ್ಷ ಮೌಲ್ಯದ ಖಾದಿ ಮತ್ತು ಸಿಲ್ಕ್ ಮಾರಾಟವಾದರೆ, ಗ್ರಾಮೋದ್ಯೋಗದ ಉತ್ಪನ್ನಗಳಾದ ರೆಡಿಮೆಡ್‌ ಗಾರ್ಮೆಂಟ್ಸ್, ಆಯುವೇರ್ದಿಕ್‌ ವಸ್ತು, ಚನ್ನಪಟ್ಟಣದ ಗೊಂಬೆ, ನೈಸರ್ಗಿಕವಾದ ಚಾಪೆ ಮತ್ತು ಚಪ್ಪಲಿ ಸೇರಿದಂತೆ ₹ 83.74 ಲಕ್ಷ ಮೊತ್ತದ ಮಾರಾಟವಾಗಿದೆ. ಮೇಳಕ್ಕೆ 30000ಕ್ಕೂ ಹೆಚ್ಚು ಜನರು ಭೇಟಿ ನೀಡಿ ಖರೀದಿಸುವ ಮೂಲಕ ಖಾದಿ ಉತ್ಪನ್ನಗಳನ್ನು ಪ್ರೋತ್ಸಾಹಿಸಿದರು. 13 ವರ್ಷಗಳ ನಂತರ ಆಯೋಜಿಸಿದ ಈ ವಸ್ತು ಪ್ರದರ್ಶನ ಯಶಸ್ವಿಯಾಗಿ ಮುಕ್ತಾಯವಾಯಿತು.

ಪ್ರಮಾಣ ಪತ್ರ ವಿತರಣೆ:

ಮೇಳದಲ್ಲಿ ಭಾಗವಹಿಸಿದವರಿಗೆ ಪ್ರದರ್ಶಕರಿಗೆ ಕೊಪ್ಪಳ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಕಾರ್ಪಣಿ ಮಾರುತಿ, ಕೊಪ್ಪಳ ಎಸ್‌ಬಿಐ ಆರ್‌ಸೆಟಿ ನಿರ್ದೇಶಕ ರಾಯೇಶ್ವರ ಪೈ ಪ್ರಮಾಣ ಪತ್ರ ವಿತರಿಸಿದರು. ಈ ವೇಳೆ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಕೆ. ವೀರೇಶ್, ನಿವೃತ್ತ ಜಿಲ್ಲಾ ಖಾದಿ ಗ್ರಾಮೊದ್ಯೋಗ ಅಧಿಕಾರಿ ಎನ್.ಜಿ. ಹುನಗುಂದ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

PREV

Recommended Stories

ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ಜಿಎಸ್ಟಿ ಕಡಿತದ ಲಾಭ ಜನರಿಗೆ ಸಿಗುವಂತಾಗಲಿ: ಸಿಎಂ ಆಶಯ