ಕನ್ನಡಪ್ರಭ ವಾರ್ತೆ ಬೆಂಗಳೂರು
ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಸಿ ‘ಶಾಂತಿಯುತ ಮಾನವ ಸರಪಳಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತ ಹರೀಶ್ ಬೈರಪ್ಪ ಎಂಬುವರು ಕರೆ ನೀಡಿದ್ದರು. ಆದರೆ ಪೊಲೀಸರು ಈ ಕಾರ್ಯಕ್ರಮಕ್ಕೆ ಯಾರಿಗೂ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೂ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು.
ಟೌನ್‌ಹಾಲ್ ಮುಂದಿನ ರಸ್ತೆಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ 100ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. 2 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಭೆಯ ಬಗ್ಗೆ ಪೋಸ್ಟ್ ಶೇರ್ ಮಾಡಿದವರಿಗೆ ನೋಟಿಸ್ ಕೂಡ ನೀಡಿದ್ದರು. ಒಂದು ವೇಳೆ ಸಭೆಗೆ ನಿಯಮ ಉಲ್ಲಂಘಿಸಿ ಯಾರಾದರೂ ಬಂದರೆ ಅಂತವರನ್ನು ಬಂಧಿಸಿ ಕರೆದೊಯ್ಯಲು ಎರಡು ಬಿಎಂಟಿಸಿ ಬಸ್‌ಗಳನ್ನು ಸಿದ್ದಪಡಿಸಲಾಗಿತ್ತು.ಪೊಲೀಸರ ಈ ಎಲ್ಲ ಕಟ್ಟುನಿಟ್ಟಿನ ಕ್ರಮಗಳಿಂದ ಯಾರೊಬ್ಬರು ಇತ್ತ ಸುಳಿಯಲಿಲ್ಲ ಎಂದು ತಿಳಿದು ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿಯವರು ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಅಬ್ಬರಿಸುತ್ತಾರೆ ಹೊರತು ಬೀದಿಯಲ್ಲಿ ಇಳಿದು ಹೋರಾಟ ಮಾಡುವ ಮನಸ್ಥಿತಿ ಇಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಮುಕುಂದರಾಜ್‌ಗೆ ನೊಟೀಸ್