ಎಸ್ಸೆಸ್ಸೆಂ ಕುಟುಂಬ ಬಗ್ಗೆ ಟೀಕೆಗೆ ಖಾಲಿದ್ ಆಕ್ರೋಶ

KannadaprabhaNewsNetwork |  
Published : Sep 06, 2026, 01:30 AM IST
5ಕೆಡಿವಿಜಿ1-ದಾವಣಗೆರೆಯ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್. | Kannada Prabha

ಸಾರಾಂಶ

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಶಾಸಕ ಸಮರ್ಥ ಎಂ.ಶಾಮನೂರು ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಲಿ. ಅವಹೇಳನಕಾರಿ, ವೈಯಕ್ತಿಕ ಟೀಕಿ ಮಾಡುವುದು ಸರಿಯಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ಷೇಪಿಸಿದ್ದಾರೆ.

- ಕಾಂಗ್ರೆಸ್ಸನ್ನು ಟೀಕಿಸುವ ನೈತಿಕತೆಯೇ ಬಿಜೆಪಿಯವರಿಗೆ ಇಲ್ಲ: ತಿರುಗೇಟು - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಶಾಸಕ ಸಮರ್ಥ ಎಂ.ಶಾಮನೂರು ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಲಿ. ಅವಹೇಳನಕಾರಿ, ವೈಯಕ್ತಿಕ ಟೀಕಿ ಮಾಡುವುದು ಸರಿಯಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ಷೇಪಿಸಿದ್ದಾರೆ.

ಬಿಜೆಪಿ ನಾಯಕರು ಜಿಲ್ಲಾ ಸಚಿವರು, ಸಂಸದೆ ಹಾಗೂ ದಕ್ಷಿಣ ಶಾಸಕರ ಬಗ್ಗೆ ವೈಯಕ್ತಿಕವಾಗಿ ಟೀಕಿಸುವುದು, ಅವಹೇಳಕಾರಿಯಾಗಿ ಮಾತನಾಡುವುದು ಸರಿಯಲ್ಲ. ಸಚಿವರು, ಸಂಸದರು, ಶಾಸಕರನ್ನು ಟೀಕಿಸುವ ನೈತಿಕತೆ ಜಿಲ್ಲೆಯ ಬಿಜೆಪಿ ನಾಯಕರಿಗಿಲ್ಲ. ಬಿಜೆಪಿಯ ಯಶ‍ಂತರಾವ್ ಜಾಧವ್‌ ಸೇರಿದಂತೆ ಕೆಲ ನಾಯಕರು ಕಾಂಗ್ರೆಸ್ಸಿನ ಜನಪ್ರತಿನಿಧಿಗಳ ಬಗ್ಗೆ ಆರೋಪಿಸುವ ಮುನ್ನ ಸತ್ಯಾಸತ್ಯತೆ ತಿಳಿಯಲಿ ಎಂದು ಸಲಹೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಟೊಂಕಕಟ್ಟಿ ಎಸ್‌.ಎಸ್‌. ಮಲ್ಲಿಕಾರ್ಜುನರ ಕುಟುಂಬ ಕಾರ್ಯೋನ್ಮುಖವಾಗಿದೆ. ವೈಯಕ್ತಿಕವಾಗಿ, ಅಸಭ್ಯ ಭಾಷೆ ಬಳಸುವುದು ರಾಜಕಾರಣಯಲ್ಲಿ ಒಳ್ಳೆಯದಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಖುದ್ದಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೇಶದಲ್ಲಿ ನಂಬರ್ ಭ್ರಷ್ಟ ಸರ್ಕಾರವೆಂದಿದ್ದನ್ನು ಮರೆಯಬಾರದು ಎಂದು ತಿಳಿಸಿದ್ದಾರೆ.

ಆಗಿನ ಸಿಎಂ ಯಡಿಯೂರಪ್ಪ, ಸಚಿವರಾದ ಕೃಷ್ಣಯ್ಯ ಶೆಟ್ಟಿ, ಜನಾರ್ದನ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದರು. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರ್ಕಾರ ಜನಪ್ರಿಯತೆ ಗಳಿಸಿದೆ. ದಿನೇದಿನೇ ಕಾಂಗ್ರೆಸ್ ಕಾರ್ಯವೈಖರಿಗೆ ತತ್ತರಿಸಿ ಹೋದ ಬಿಜೆಪಿಯವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಇದ್ದಾಗ ದಾವಣಗೆರೆಯಲ್ಲಿ ಯಾವ ರೀತಿ ಆಡಳಿತ ನಡೆಸಿದರು, ಕಾಮಗಾರಿ ಕೈಗೊಂಡರು? ಅಶೋಕ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಮೇಲ್ಸೇತುವೆ, ಖಾಸಗಿ ಬಸ್ ನಿಲ್ದಾಣ ನೋಡಿದರೆ ಗೊತ್ತಾಗುತ್ತದೆ. ಅಧಿಕಾರದಲ್ಲಿದ್ದಾಗ ಹಣ ಲೂಟಿ ಹೊಡೆಯುವುದರಲ್ಲಿ ಬಿಜೆಪಿ ನಾಯಕರು ಮಗ್ನರಾಗಿದ್ದರೆ ಹೊರತು ಅಭಿವೃದ್ಧಿ ಬಗ್ಗೆ ಯೋಚಿಸಲಿಲ್ಲ. ಭೂತದ ಬಾಯಿಯಲ್ಲಿ ಭಗವದ್ಗೀತೆ ಎಂಬಂತೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ನಾಚಿಕೆ ಆಗಬೇಕು ಎಂದು ಹೇಳಿಕೆಯಲ್ಲಿ ಟೀಕಿಸಿದ್ದಾರೆ.

- - -

-5ಕೆಡಿವಿಜಿ1: ಸೈಯದ್ ಖಾಲಿದ್ ಅಹ್ಮದ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ
ಒಬ್ಬರ ರಕ್ತದಾನದಿಂದ ಮೂವರಿಗೆ ಜೀವದಾನ: ಡಾ.ಆನಂದ್‌