ಆನೆ ತುಳಿತದಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಖಂಡ್ರೆ ಭೇಟಿ

KannadaprabhaNewsNetwork |  
Published : Dec 16, 2024, 12:46 AM IST
ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದ ಕೆರೆಗದ್ದೆಯ ಉಮೇಶ್ ಅವರ ಮನೆಗೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಬೇಟಿ ನೀಡಿ ಸಾಂತ್ವಾನ ಹೇಳಿದರು.  | Kannada Prabha

ಸಾರಾಂಶ

ಇತ್ತೀಚಿಗೆ ಆನೆ ತುಳಿತದಿಂದ ಮೃತಪಟ್ಟ ಸೀತೂರು ಗ್ರಾಮದ ಕೆರೆಗದ್ದೆಯ ಉಮೇಶ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ನೀಡಿ ಉಮೇಶ್ ಅವರ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ನರಸಿಂಹರಾಜಪುರ: ಇತ್ತೀಚಿಗೆ ಆನೆ ತುಳಿತದಿಂದ ಮೃತಪಟ್ಟ ಸೀತೂರು ಗ್ರಾಮದ ಕೆರೆಗದ್ದೆಯ ಉಮೇಶ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ನೀಡಿ ಉಮೇಶ್ ಅವರ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಇತ್ತೀಚಿಗೆ ಆನೆಗಳ ಸಂಖ್ಯೆ ಜಾಸ್ತಿಯಾಗಿದೆ. ಆನೆ ತುಳಿತದಿಂದ ಉಮೇಶ್ ಮತಪಟ್ಟಿರುವುದು ಸರ್ಕಾರಕ್ಕೂ ನೋವು ತಂದಿದೆ. ಈಗಾಗಲೇ ಸರ್ಕಾರದಿಂದ ₹15 ಲಕ್ಷ , ಅರಣ್ಯ ಇಲಾಖೆಯಿಂದ ₹5 ಲಕ್ಷ ಪರಿಹಾರ ನೀಡಿದ್ದೇವೆ. ಶಾಸಕ ಟಿ.ಡಿ. ರಾಜೇಗೌಡ ₹1 ಲಕ್ಷ ವೈಯ್ಯಕ್ತಿಕವಾಗಿ ನೀಡಿದ್ದರು. ನಾನು ₹1 ಲಕ್ಷ ವೈಯ್ಯಕ್ತಿಕವಾಗಿ ನೀಡುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್ ಅವರು ವೈಯ್ಯಕ್ತಿಕವಾಗಿ ₹2 ಲಕ್ಷ ನೀಡುವುದಾಗಿ ತಿಳಿಸಿದ್ದಾರೆ.

ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಉಮೇಶ್ ಅವರು ಕಾಡಾನೆಗಳ ದಾಳಿಗೆ ತುತ್ತಾಗಿ ಮೃತ ಪಟ್ಟಿರುವುದಕ್ಕೆ ಸರ್ಕಾರವು ಸಾಂತ್ವಾನ ಹೇಳುತ್ತಿದೆ. ನಾನು ಈ ಮನೆಗೆ 2 ಬಾರಿ ಭೇಟಿ ನೀಡಿದ್ದೇನೆ. ಸರ್ಕಾರದಿಂದ ಪರಿಹಾರ ನೀಡಿದ್ದೇವೆ. ಆನೆಗಳ ಕಾಟ ತಡೆಯಲು ಶಾಶ್ವತ ಪರಿಹಾರ ರೂಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್, ಚಿಕ್ಕಮಗಳೂರು ಕ್ಷೇತ್ರದ ಶಾಸಕ ತಮ್ಮಯ್ಯ, ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಆಮಟೆ. ಕೊಪ್ಪ ಡಿ. ಎಫ್.ಓ ನಂದೀಶ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ
ತೈಲ ಕೊರತೆ ವದಂತಿ: ಖರೀದಿಗೆ ಮುಗಿಬಿದ್ದ ಜನ-ಬಂಕ್‌ಗಳಲ್ಲಿ ಭಾರೀ ರಷ್‌