ಮೈಲಾರ ಮಲ್ಲಣ್ಣ ದೇವರ ದರ್ಶನ ಪಡೆದ ಖಂಡ್ರೆ

KannadaprabhaNewsNetwork |  
Published : Oct 04, 2025, 12:00 AM IST
ಚಿತ್ರ 3ಬಿಡಿಆರ್50 | Kannada Prabha

ಸಾರಾಂಶ

ತಾಲೂಕಿನ ಖಾನಾಪುರ (ಮೈಲಾರ) ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಗುರುವಾರ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ದೇವರ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು.

ಕನ್ನಡಪ್ರಭ ವಾರ್ತೆ ಭಾಲ್ಕಿ

ತಾಲೂಕಿನ ಖಾನಾಪುರ (ಮೈಲಾರ) ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಗುರುವಾರ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ದೇವರ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು.

ಗುರುವಾರ ರಾತ್ರಿ 11ಗಂಟೆಗೆ ಮಲ್ಲಣ್ಣ ದೇಗುಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಲ್ಲಣ್ಣ ದೇವರಿಗೆ ಆರತಿ ಬೆಳಗುವುದರ ಜತೆಗೆ ವಿಶೇಷ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೆರವಣಿಗೆ ಮತ್ತು ರಥೋತ್ಸವಕ್ಕೆ ಚಾಲನೆ ನೀಡಿದರು.

ಘೃತಮಾರಿ ತುಪ್ಪದ ಮಾಳವ್ವ (ಗುರುತ ಮಲ್ಲಮ್ಮ) ದೇವಸ್ಥಾನ, ಮುಖ್ಯ ಬೀದಿ, ಬೀದರ-ಭಾಲ್ಕಿ ಮುಖ್ಯ ರಸ್ತೆ ಮೂಲಕ ಹಾದು ಹನುಮಾನ್‌ ದೇವಸ್ಥಾನಕ್ಕೆ ಪಲ್ಲಕ್ಕಿ ಮೆರವಣಿಗೆ ತಲುಪಿತು.

ಮೆರವಣಿಗೆಯುದ್ದಕ್ಕೂ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ವಗ್ಗೆ, ವಾರುಗಳು, ಭಕ್ತರು ಕುಣಿದು ಸಂಭ್ರಮಿಸಿದರು. ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಮಹಾ ಮಂಗಳಾರತಿಯೊಂದಿಗೆ ಉತ್ಸವ ಸಮಾರೋಪಗೊಂಡಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪೂರ, ರಾಜಶೇಖರ ಪಾಟೀಲ್, ಮೀನುಗಾರಿಕೆ ನಿಗಮ ಮಂಡಳಿಯ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ, ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಬಿಡಿಎ ಮಾಜಿ ಅಧ್ಯಕ್ಷ ಪಂಡಿತ ಚಿದ್ರಿ, ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ದೇವಸ್ಥಾನದ ಆಡಳಿತಾಧಿಕಾರಿ, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್, ಕಾರ್ಯ ನಿರ್ವಾಹಣಾಧಿಕಾರಿ ಅನಂತ ರಾವ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂಧಾಳ, ಮಾರುತಿ ಪಾಟೀಲ್, ರಾಜಕುಮಾರ ಪಾಟೀಲ್, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ, ಆಕಾಶ ಹಿರಿವಗ್ಗೆ, ಪಂಡಿತ, ಬೀರಪ್ಪ ಪೂಜಾರಿ ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ