ಕನ್ನಡಪ್ರಭ ವಾರ್ತೆ ಬಸವಕಲ್ಯಾಣ
ಲೋಕಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರಾರ್ಥವಾಗಿ ಇದೇ ಏ. 12ರಂದುಬಸವಕಲ್ಯಾಣ ನಗರದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಅವರು ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸಭೆ ನಡೆಸಿ, ಬರುವ ಮೇ 7ರಂದು ನಡೆಯಲಿರುವ ಬೀದರ್ ಲೋಕಸಭಾ ಚುನಾವಣೆ ಅಂಗವಾಗಿ ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಅವರ ಪರವಾಗಿ ಮತಯಾಚನೆ ಮಾಡಲು ಏ. 12ರಂದು ಸಂಜೆ 4ಗಂಟೆಗೆ ಮಲ್ಲಿಕಾರ್ಜುನ್ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.ಈ ಕಾರ್ಯಕ್ರಮವು ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲ ತಾಲೂಕಿನಿಂದ ಹಾಗೂ ಆಳಂದ ಚಿಂಚೋಳಿ ತಾಲೂಕಿನಿಂದಲೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಆಗಮಿಸಲಿದ್ದಾರೆ ಹೀಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಪಕ್ಷದ ಪ್ರಮುಖರಿಗೆ ಅವರು ತಿಳಿಸಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದು ಮತ್ತು ಕಲ್ಯಾಣ ಕರ್ನಾಟಕದ ಮೇರು ನಾಯಕ, 371ಜೆ ರೂವಾರಿಗಳಾದ ಪ್ರಯುಕ್ತ ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕೆಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.ಈ ಸಂದರ್ಭದಲ್ಲಿ ಮಾಜಿ ಎಂಎಲ್‌ಸಿ ವಿಜಯಸಿಂಗ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕೆ. ಪುಂಡಲಿಕರಾವ್, ಅರವಿಂದ ಅರಳಿ ಎಂಎಲ್‌ಸಿ, ಅಜರ್ ಅಲಿ ನವರಂಗ, ಶಶಿಕಾಂತ ದುರ್ಗೆ, ಶಿವರಾಜ ನರಶೆಟ್ಟಿ, ದಿಲೀಪ ಶಿಂಧೆ, ಅಮೃತ ಚಿಮಕೋಡ, ದತ್ತಾತ್ರಿ ಮೂಲಗೆ ಸೇರಿದಂತೆ ಮತ್ತಿತರರು ಉಪಸ್ತಿತರಿದ್ದರು.