ಕನ್ನಡಪ್ರಭ ವಾರ್ತೆ ರಾಯಚೂರು
ಬುಧವಾರ ಮಾತನಾಡಿದ ಅವರು, ರಾಯಚೂರು ನಗರದ ಬಸವೇಶ್ವರ ವೃತ್ತದ ಪಕ್ಕದಲ್ಲಿರುವ ವಾಲ್ಕಾಟ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನ 2:30 ಕ್ಕೆ ಪ್ರಚಾರ ಸಮಾವೇಶವನ್ನು ಹಮ್ಮಿಕೊಂಡಿದ್ದು ಈಗಾಗಲೇ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಮಾವೇಶದಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಮುಖಂಡರು,ಕಾರ್ಯಕರ್ತರು ಸೇರಿದಂತೆ ಸುಮಾರು 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದ್ದು ಈ ಹಿನ್ನೆಲೆಯಲ್ಲಿ 70 ಸಾವಿರ ಚದರಡಿಯಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದ್ದು, 20 ಸಾವಿರಕ್ಕು ಹೆಚ್ಚು ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಪೆಂಡಾಲ್‌ನಲ್ಲಿ 20 ಎಲ್‌ಇಡಿ ಇರಿಸಲಾಗಿದ್ದು, ಬಿಸಿಲು ಹೆಚ್ಚಾಗಿರುವುದರಿಂದ 50 ಏರ್ ಕೂಲರ್‌ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.ಲೋಕಾ ಚುನಾವಣೆಯಲ್ಲಿ ಹೊರಗಿನವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ಅವರ ಆರೋಪಕ್ಕೆ ಉತ್ತರಿಸಿದ ಅವರು ಬಿಜೆಪಿಗರು ರಾಜ್ಯದ ವಿವಿಧೆ ಕ್ಷೇತ್ರಗಳಲ್ಲಿ ಯಾರನ್ನು ಎಲ್ಲಿನಿಲ್ಲಿಸಿದ್ದಾರೆ ಎನ್ನುವುದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಈ ವೇಳೆ ಮಾನ್ವಿ ಶಾಸಕ ಜಿ.ಹಂಪಯ್ಯ ಸಾಹುಕಾರ, ಡಿಸಿಸಿ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ,ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಮುಖಂಡರಾದ ಬಸವರಾಜರೆಡ್ಡಿ, ಅಮರೇಗೌಡ ಹಂಚಿನಾಳ,ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ ಇದ್ದರು.