ಕನ್ನಡಪ್ರಭ ವಾರ್ತೆ ವಿಜಯಪುರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡೆ ಖಂಡನಾರ್ಹ. ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಓಲೈಸಲು ಈ ರೀತಿ ಒಬ್ಬ ದೇಶದ ಹೆಮ್ಮೆಯ ಪ್ರಧಾನಿಯನ್ನೇ ಅವಮಾನಿಸಿ ಕೀಳುಮಟ್ಟದ ಪದ ಪ್ರಯೋಗಿಸಿರುವುದು ಖರ್ಗೆ ಅವರ ಹಿರಿತನಕ್ಕೆ ಶೋಭೆ ತರುವಂತಹದಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡೆ ಖಂಡನಾರ್ಹ. ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಓಲೈಸಲು ಈ ರೀತಿ ಒಬ್ಬ ದೇಶದ ಹೆಮ್ಮೆಯ ಪ್ರಧಾನಿಯನ್ನೇ ಅವಮಾನಿಸಿ ಕೀಳುಮಟ್ಟದ ಪದ ಪ್ರಯೋಗಿಸಿರುವುದು ಖರ್ಗೆ ಅವರ ಹಿರಿತನಕ್ಕೆ ಶೋಭೆ ತರುವಂತಹದಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವವರು ದೇಶದ ಪ್ರಧಾನಿಯ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಬಿಜೆಪಿ ಅಷ್ಟೇ ಅಲ್ಲದೇ ಇಡೀ ಭಾರತೀಯರಿಗೆ ನೋವು ತರಿಸಿದೆ. ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ, ಭಯೋತ್ಪಾದಕರನ್ನು ದಮನಗೊಳಿಸಲು ದಿಟ್ಟ ಹೆಜ್ಜೆ ಇರಿಸುವ ಪ್ರಧಾನಿಯ ಬಗ್ಗೆಯೇ ಈ ರೀತಿ ಅಗೌರವ ತರುವ ಹೇಳಿಕೆ ನೀಡುವುದು ಯಾವ ಉದ್ದೇಶಕ್ಕಾಗಿ ಎಂದು ಅವರು ಪ್ರಶ್ನಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.