ಶಿವಮೊಗ್ಗಮಹಿಳಾ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಹಾಗೂ ಉತ್ತಮ ಕ್ರೀಡಾ ವೇದಿಕೆ ಕಲ್ಪಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಅಸ್ಮಿತಾ ಮಹಿಳಾ ವುಶು ಲೀಗ್–2026 ಹಾಗೂ 25ನೇ ಕರ್ನಾಟಕ ರಾಜ್ಯ ಜೂನಿಯರ್ ವುಶು ಚಾಂಪಿಯನ್‌ಶಿಪ್–2026 ಅನ್ನು ಸೆ.19 ಮತ್ತು 20ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ವುಶು ಸಂಸ್ಥೆ ಅಧ್ಯಕ್ಷ ಅಬ್ದುಲ್ ಗನಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಹಿಳಾ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಹಾಗೂ ಉತ್ತಮ ಕ್ರೀಡಾ ವೇದಿಕೆ ಕಲ್ಪಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಅಸ್ಮಿತಾ ಮಹಿಳಾ ವುಶು ಲೀಗ್–2026 ಹಾಗೂ 25ನೇ ಕರ್ನಾಟಕ ರಾಜ್ಯ ಜೂನಿಯರ್ ವುಶು ಚಾಂಪಿಯನ್‌ಶಿಪ್–2026 ಅನ್ನು ಸೆ.19 ಮತ್ತು 20ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ವುಶು ಸಂಸ್ಥೆ ಅಧ್ಯಕ್ಷ ಅಬ್ದುಲ್ ಗನಿ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಿವಮೊಗ್ಗ ಜಿಲ್ಲಾ ವುಶು ಸಂಸ್ಥೆ ಹಾಗೂ ಕರ್ನಾಟಕ ವುಶು ಸಂಸ್ಥೆಯ ಸಹಯೋಗದಲ್ಲಿ ಕ್ರೀಡಾಕೂಟ ನಡೆಯಲಿದೆ. ಸೆ.19ರಂದು ಬೆಳಗ್ಗೆ 8ಕ್ಕೆ ಗೋಪಿ ವೃತ್ತದಿಂದ ನೆಹರು ಒಳಾಂಗಣ ಕ್ರೀಡಾಂಗಣದವರೆಗೆ ತಿರಂಗ ಯಾತ್ರೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಜೂನಿಯರ್ ವುಶು ಚಾಂಪಿಯನ್‌ಶಿಪ್ ಉದ್ಘಾಟನೆ ಹಾಗೂ ಸಂಜೆ 6ಕ್ಕೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದರು.
ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ಬಾಲ್ಕೀಸ್ ಬಾನು ಸೇರಿ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಸೆ.20ರಂದು ಬೆಳಿಗ್ಗೆ 10ಕ್ಕೆ ಅಸ್ಮಿತಾ ಮಹಿಳಾ ವುಶು ಲೀಗ್ ಆರಂಭವಾಗಲಿದ್ದು, ಸಂಜೆ 6ಕ್ಕೆ ಸಮಾರೋಪ ನಡೆಯಲಿದೆ. ವಿಜೇತರಿಗೆ ಪ್ರಶಸ್ತಿ, ಪದಕ ಹಾಗೂ ಪ್ರಮಾಣಪತ್ರ ನೀಡಿ, ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ವಿವಿಧ ಜಿಲ್ಲೆಗಳ 400ಕ್ಕೂ ಹೆಚ್ಚು ಮಹಿಳಾ ವುಶು ಕ್ರೀಡಾಪಟುಗಳು ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಿಳೆಯರು ಹಾಗೂ ಬಾಲಕಿಯರಲ್ಲಿ ವುಶು ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವುದು, ಪ್ರತಿಭೆಗಳನ್ನು ಗುರುತಿಸುವುದು ಹಾಗೂ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವುದು ಲೀಗ್‌ನ ಉದ್ದೇಶವಾಗಿದೆ. ಕ್ರೀಡಾಪಟುಗಳಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.