ರಾಜ್ಯಸಭೆಗೆ ಖೇರಾ, ಮನ್ಸೂರ್‌ ನಾಮಪತ್ರ

KannadaprabhaNewsNetwork |  
Published : Jun 07, 2026, 01:45 AM IST
Nomination 5 | Kannada Prabha

ಸಾರಾಂಶ

ರಾಜ್ಯಸಭೆಯ 4 ಮತ್ತು ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಇಬ್ಬರು ಮತ್ತು ವಿಧಾನ ಪರಿಷತ್ತಿಗೆ ನಾಲ್ವರು ಅಭ್ಯರ್ಥಿಗಳು ಶನಿವಾರ ವಿಧಾನಸೌಧದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯಸಭೆಯ 4 ಮತ್ತು ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಇಬ್ಬರು ಮತ್ತು ವಿಧಾನ ಪರಿಷತ್ತಿಗೆ ನಾಲ್ವರು ಅಭ್ಯರ್ಥಿಗಳು ಶನಿವಾರ ವಿಧಾನಸೌಧದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ರಾಜ್ಯಸಭೆ ಅಭ್ಯರ್ಥಿಗಳಾದ ಎಐಸಿಸಿ ಪ್ರಚಾರ ವಿಭಾಗದ ಉಸ್ತುವಾರಿ ಪವನ್‌ ಖೇರಾ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮನ್ಸೂರ್‌ ಅಲಿಖಾನ್ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್‌ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರ್‌, ಬಿ.ಎಸ್‌.ಶಿವಣ್ಣ ಮತ್ತು ಪಿ.ವಿ.ಮೋಹನ್‌ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸತೀಶ್‌ ಜಾರಕಿಹೊಳಿ ಸೇರಿದಂತೆ ಇತರೆ ನಾಯಕರು ಅಭ್ಯರ್ಥಿಗಳಿಗೆ ಸಾಥ್‌ ನೀಡಿದರು.

ಐದನೇ ಅಭ್ಯರ್ಥಿ ನಾಳೆ ಸಲ್ಲಿಕೆ:

ಶುಕ್ರವಾರವಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದರು. ಇದರೊಂದಿಗೆ ರಾಜ್ಯಸಭೆಗೆ ಕಾಂಗ್ರೆಸ್ ಘೋಷಿಸಿದ್ದ ಮೂವರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ. ವಿಧಾನ ಪರಿಷತ್‌ಗೆ ಘೋಷಿಸಿದ್ದ ಐವರು ಅಭ್ಯರ್ಥಿಗಳ ಪೈಕಿ ನಾನೂ ಸೇರಿ ನಾಲ್ವರು ನಾಮಪತ್ರ ಸಲ್ಲಿಸಿದ್ದೇವೆ. ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಆಚರಿಸಲಿ
ಮಕ್ಕಳಿಗೆ ಪರಿಸರ ಸಂರಕ್ಷಣೆ ಪಾಠ ಬಹುಮುಖ್ಯ: ವೈ.ಕೆ.ತಿಮ್ಮೇಗೌಡ