ಕನ್ನಪ್ರಭ ವಾರ್ತೆ ಮಂಡ್ಯ
ಮುರಳಿ ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಿದರು.
ಮೈಸೂರಿನಲ್ಲಿ ಕಾನೂನು ವಿವಿ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ದಿನೇಶ್ ಗೂಳಿಗೌಡ ಮನವಿಬೆಂಗಳೂರು:
ಹುಬ್ಬಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಮೈಸೂರಿನಲ್ಲಿ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕಾನೂನು ವಿವಿ ಸಲಹಾ ಮಂಡಳಿ ಸದಸ್ಯ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಅವರಿಗೆ ಪತ್ರ ಬರೆದಿರುವ ಅವರು, ಕಾನೂನು ವಿವಿ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ 176 ಕಾನೂನು ಕಾಲೇಜುಗಳಿದ್ದು, ಮೂವತ್ತು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ ಮೈಸೂರು, ಬೆಂಗಳೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಸೇರಿ ಹಳೆ ಮೈಸೂರು ಪ್ರಾಂತ್ಯದ ಭಾಗದಲ್ಲಿರುವ ಶೇ. 50ರಷ್ಟು ಕಾಲೇಜುಗಳಿವೆ. ಹೀಗಾಗಿ ಶೇ. 50ಕ್ಕೂ ವಿದ್ಯಾರ್ಥಿಗಳು ಕೂಡ ಈ ಭಾಗದವರೇ ಆಗಿದ್ದಾರೆ.
ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿರುವುದರಿಂದ ಇವರೆಲ್ಲರೂ ತಮ್ಮ ಶೈಕ್ಷಣಿಕ ದಾಖಲಾತಿ, ಅಂಕಪಟ್ಟಿ ಅಥವಾ ಇತರೆ ಆಡಳಿತಾತ್ಮಕ ಕೆಲಸಗಳಿಗಾಗಿ ದೂರದ ಹುಬ್ಬಳ್ಳಿಗೆ ಪ್ರಯಾಣಿಸಬೇಕಾಗುತ್ತದೆ. ಇದನ್ನು ತಪ್ಪಿಸಲು ಮೈಸೂರಿನಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.