ಕನ್ನಡಪ್ರಭವಾರ್ತೆ ಮೂಲ್ಕಿ
ಕಿನ್ನಿಗೋಳಿಯ ಯಕ್ಷಲಹರಿ ಮತ್ತು ಯುಗಪುರುಷದ ಸಂಯುಕ್ತ ಆಶ್ರಯದಲ್ಲಿ ಕರ್ಣಾಟಕ ಬ್ಯಾಂಕ್ ಹಾಗೂ ನಮ್ಮ ಕುಡ್ಲದ ಸಹಕಾರದೊಂದಿಗೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ 7 ದಿನಗಳ ಕಾಲ ನಡೆದ 24 ನೇ ವರ್ಷ ಸಂಭ್ರಮ ಯಕ್ಷಗಾನ ತಾಳಮದ್ದಳೆ ಸಪ್ತಾಹ ‘ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇಯುಗೇ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಗರಿ ಸಮೂಹ ಸಂಸ್ಥೆಗಳ ಮಾಲೀಕ ರಾಘವೇಂದ್ರ ರಾವ್ ಅವರು ವಿದ್ಯಾರ್ಥಿ ವೇತನ ಪ್ರಧಾನ ಮಾಡಿದರು. ಕಲಾವಿದರ ನೆಲೆಯಲ್ಲಿ ರವಿ ಅಲೆವೂರಾಯ ವರ್ಕಾಡಿ ಹಾಗೂ ಬಾಲಕೃಷ್ಣ ದೇವಾಡಿಗ ಪಂಜ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ನಿಡ್ಡೋಡಿ ಜೋಕಿಮ್ ಕೊರೆಯ ಅವರಿಗೆ ಕಲಾಪೋಷಕ ಸಂಮಾನ ನೀಡಿ ಗೌರವಿಸಲಾಯಿತು.ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿ, ಕ ಸಾ ಪ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ನಮ್ಮ ಕುಡ್ಲ ವಾಹಿನಿಯ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರಾ, ಶುಂಠಿಲಪದವು ಗ್ರಾ.ಪಂ. ನ ಪಿಡಿಓ ಉಗ್ಗಪ್ಪ ಮೂಲ್ಯ, ಧರ್ಮದರ್ಶಿ ಮೋಹನದಾಸ ಸುರತ್ಕಲ್, ಯುಗಪುರುಷ ಸಂಸ್ಥೆಯ ಭುವನಾಭಿರಾಮ ಉಡುಪ, ಯಕ್ಷ ಲಹರಿಯ ಅಧ್ಯಕ್ಷ ರಘುನಾಥ ಕಾಮತ್ ಕೆಂಚನಕೆರೆ, ಕಿನ್ನಿಗೋಳಿ ಇನ್ನರ್ ಕ್ಲಬ್ ಅಧ್ಯಕ್ಷೆ ಸವಿತಾ ಸಂತೋಷ್, ನಿವೃತ್ತ ಶಿಕ್ಷಕ ಸಾಯಿನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.