ಕಾರ್ಕಳ: ಕನ್ನಡ ಶಾಲೆಗಳು ನಮ್ಮ ಸಾಹಿತ್ಯ, ಕಲೆ, ಜನಪದ ಹಾಗೂ ಹಬ್ಬ-ಹರಿದಿನಗಳ ಕುರಿತು ಅರಿವು ಮೂಡಿಸುವ ಮಹತ್ವದ ಕೇಂದ್ರಗಳಾಗಿವೆ. ಇದರಿಂದ ಮಕ್ಕಳಲ್ಲಿ ತಮ್ಮ ನಾಡಿನ ಬಗ್ಗೆ ಹೆಮ್ಮೆ ಬೆಳೆಯುತ್ತದೆ. ಇಂತಹ ಮಹಾನ್ ಕಾರ್‍ಯಕ್ಕೆ ಪೋಷಕರು ಕೈಜೋಡಿಸಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕು ಘಟಕ ವತಿಯಿಂದ ಶೇಡಿಮನೆ ಅರಸಮ್ಮಕಾನು ಶ್ರೀ ನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಗಂಗಡಬೈಲು ಸುಬ್ರಾಯ ಬಾಯರಿ ವೇದಿಕೆಯಲ್ಲಿ ನಡೆದ 6ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಅರಸಮ್ಮಕಾನು ಕ್ಷೇತ್ರದ ಅರ್ಚಕ ನಾಗರಾಜ ಬಾಯರಿ, ಅಮಾಸೆಬೈಲು ಸಬ್ ಇನ್‌ಸ್ಪೆಕ್ಟರ್ ಅಶೋಕ್, ಉದ್ಯಮಿ ಹೆಬ್ರಿ ಯೋಗೀಶ್ ಭಟ್, ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾಗರಾಜ್ ಶೆಟ್ಟಿ, ಮಡಾಮಕ್ಕಿ ಅನಂತ ತಂತ್ರಿ, ಕಾರ್ಕಳ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಬೆಳ್ವೆ ಸಹಕಾರಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಉದ್ಯಮಿ ಮಡಾಮಕ್ಕಿ ಶಶಿಧರ ಶೆಟ್ಟಿ, ಧರ್ಮಸ್ಥಳ ಯೋಜನಾಧಿಕಾರಿ ಲೀಲಾವತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹೆಬ್ರಿಯ ವಿದ್ಯಾಧರ ಹೆಗ್ಡೆ, ಮುನಿಯಾಲಿನ ಸುಧಾಕರ ಕೆ.ಜಿ., ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್‍ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧಿಕಾರಿ ಮನೋಹರ್ ಪಿ., ರಜನಿ ಗೋಪಾಲ ಶೆಟ್ಟಿ ಶೇಡಿಮನೆ, ಉದ್ಯಮಿ ಗಣೇಶ ಹಾಂಡ ಶಿವಪುರ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಕೆ. ಸುಧಾಕರ ಶೆಟ್ಟಿ ಅರಸಮ್ಮಕಾನು, ಕಾರ್‍ಯಾಧ್ಯಕ್ಷ ಶಂಕರ ಪೂಜಾರಿ, ಸಂಚಾಲಕ ರಾಧಾಕೃಷ್ಣ ಕ್ರಮಧಾರಿ ಸಹಿತ ಜನಪ್ರತಿನಿಧಿಗಳು, ವಿವಿಧ ಗಣ್ಯರು, ಸಾಹಿತಿಗಳು, ಸ್ವಾಗತ ಸಮಿತಿ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಅಧಿಕಾರಿಗಳು ಭಾಗವಹಿಸಿದ್ದರು.ಮುದ್ದೂರು ಶ್ರೀನಿವಾಸ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಧಾಕರ ಶೆಟ್ಟಿ ಅರಸಮ್ಮಕಾನು ಸ್ವಾಗತಿಸಿದರು. ಶಂಕರ ಪೂಜಾರಿ ವಂದಿಸಿದರು. ಶಶಿಧರ ಶೆಟ್ಟಿ, ಗಣೇಶ್, ನವೀನ ಶೆಟ್ಟಿ ಮಡಾಮಕ್ಕಿ ನಿರೂಪಿಸಿದರು.
ಪುಸ್ತಕ ಬಿಡುಗಡೆ: ಅರುಣಾ ಹೆಬ್ರಿ ಅವರ ‘ಅರುಣೋದಯ ಕಾಲದಲ್ಲಿ’, ಅರಸಮ್ಮಕಾನು ಸಿಂಚನಾ ಎಸ್. ಶೆಟ್ಟಿ ಅವರ ‘ಹೃದಯ ಸಿಂಚನಾ’ ಕವನ ಸಂಕಲನ ಮತ್ತು ಮಂಜುನಾಥ ಕೆ. ಶಿವಪುರ ಅವರ ‘ಒಲುಮೆ ಗೀತಿಕಾ’ ಭಾವಗೀತೆ ಸಂಕಲನವನ್ನು ಡಾ. ಶೇಡಿಮನೆ ವಿಕ್ರಂ ಶೆಟ್ಟಿ ಬಿಡುಗಡೆ ಮಾಡಿದರು. ದಾನಿಗಳನ್ನು, ಸಮ್ಮೇಳನದ ಪೋಷಕರು, ಸಾಧಕರನ್ನು ಗೌರವಿಸಲಾಯಿತು. ಉಡುಪಿ ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಶೈಕ್ಷಣಿಕ ಉಪನ್ಯಾಸ ನೀಡಿದರು. ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮ ನಡೆಯಿತು.ಪುರ ಮೆರವಣಿಗೆ, ಧ್ವಜಾರೋಹಣ: ಅರಸಮ್ಮಕಾನು ಪೇಟೆಯಿಂದ ಆರಂಭಗೊಂಡ ಸಮ್ಮೇಳನದ ಸರ್ವಾಧ್ಯಕ್ಷರು ಮತ್ತು ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಶ್ರೀ ಕ್ಷೇತ್ರ ಕಮಲಶಿಲೆಯ ಅನುವಂಶಿಕ ಆಡಳಿತ ಮೋಕ್ತೇಸರ ಸಚ್ಚಿದಾನಂದ ಚಾತ್ರ ಚಾಲನೆ ನೀಡಿದರು.