ಹೊಸಕೋಟೆ: ತಾಲೂಕಿನ ದೊಡ್ಡ ಹುಲ್ಲೂರು ಗ್ರಾಪಂ ವ್ಯಾಪ್ತಿಗೆ ಸೇರಿದ ಲಾಲ್ ಬಾಗ್ ದಾಸರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕಿರಣ್‌ಕುಮಾರ್, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಜಕೀಯಕ್ಕೆ ಅವಕಾಶ ಕೊಡದೆ ಎಲ್ಲಾ ಸದಸ್ಯರ ಸಹಕಾರದಿಂದ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಉಪಾಧ್ಯಕ್ಷ ಕೆ.ಎಂ.ಮೂರ್ತಿ ಮಾತನಾಡಿ, ಸಹಕಾರ ಸಂಘದಲ್ಲಿ ಸಿಗುವ ಎಲ್ಲಾ ರೀತಿಯ ಸವಲತ್ತುಗಳನ್ನು ಹಾಲು ಉತ್ಪಾದಕರಿಗೆ ಸಮರ್ಪಕವಾಗಿ ತಲುಪಿಸುವುದರ ಮೂಲಕ ಹೈನೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದರು.ಡೇರಿ ಕಾರ್ಯದರ್ಶಿ ಮೂರ್ತಿ, ಸಿಇಒ ಡಿ.ಎ.ಮೂರ್ತಿ, ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಮೂರ್ತಿ, ಗ್ರಾಪಂ ಉಪಾಧ್ಯಕ್ಷ ಮುನಾಂಜಿ, ಮಾಜಿ ಅಧ್ಯಕ್ಷ ರಮೇಶ್, ಮಾಜಿ ಸದಸ್ಯ ಮಂಜುನಾಥ್, ಮುಖಂಡರಾದ ಡಿ.ಕೆ. ಸುಬ್ರಮಣಿ, ಶಂಕರ್, ಅಂಜನ್‌ಕುಮಾರ್ ಇತರರು ಹಾಜರಿದ್ದರು. ಫೋಟೋ : 27 ಹೆಚ್‌ಎಸ್‌ಕೆ 1
ಹೊಸಕೋಟೆ ತಾಲೂಕಿನ ಲಾಲ್‌ಬಾಗ್ ದಾಸರಹಳ್ಳಿ ಡೇರಿ ನೂತನ ಅಧ್ಯಕ್ಷ ಕಾಂಗ್ರೆಸ್ ಬೆಂಬಲಿತ ಕಿರಣ್‌ಕುಮಾರ್, ಉಪಾಧ್ಯಕ್ಷ ಬಿಜೆಪಿ ಬೆಂಬಲಿತ ಮೂರ್ತಿ ಅವರನ್ನು ಸದಸ್ಯರು, ಬೆಂಬಲಿತರು ಅಭಿನಂದಿಸಿದರು.