ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ: ಕಿಶೋರ್ ಕುಮಾರ್ ಕುಂದಾಪುರ

KannadaprabhaNewsNetwork |  
Published : Oct 21, 2024, 12:47 AM ISTUpdated : Oct 21, 2024, 12:48 AM IST
ಕಿಶೋರ್20 | Kannada Prabha

ಸಾರಾಂಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಗ್ರಾಮ ಮಟ್ಟದಿಂದ ರಾಷ್ಟ್ರಮಟ್ಟದ ವರೆಗಿನ ವಿವಿಧ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷಕ್ಕಾಗಿ ಶ್ರಮಿಸಿರುವ ಕುಟುಂಬದ ಹಿನ್ನೆಲೆಯ, ಸಣ್ಣ ಸಮುದಾಯದಿಂದ ಮುನ್ನೆಲೆಗೆ ಬಂದಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಓರ್ವ ನಿಷ್ಠಾವಂತ ಕಾರ್ಯಕರ್ತನಿಗೆ ಬಿಜೆಪಿ ಅವಕಾಶ ನೀಡಿದೆ.ಕಳೆದ ನಾಲ್ಕು ಅವಧಿಯಲ್ಲಿ ಸದ್ರಿ ವಿಧಾನ ಪರಿಷತ್ ಸ್ಥಾನವನ್ನು ತನ್ನದಾಗಿಸಿಕೊಂಡಿರುವ ಬಿಜೆಪಿಗೆ ಸ್ವಾಭಾವಿಕವಾಗಿಯೇ ಅಂತರದ ಗೆಲುವಿನ ವಿಶ್ವಾಸವಿದೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಸರಕಾರದ ದುರಾಡಳಿತ, ಹಗರಣಗಳ ಸರಮಾಲೆ, ಅಭಿವೃದ್ಧಿ ರಹಿತ ಜನವಿರೋಧಿ ನೀತಿ ಗೆಲುವಿನ ಅಂತರವನ್ನು ಹೆಚ್ಚಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಪಕ್ಷದ ಕಾರ್ಯ ಪದ್ಧತಿಯಂತೆ ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಪ್ರಮುಖರು, ಸಂಸದರು, ಶಾಸಕರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳ ಸಂಘಟಿತ ಪ್ರಯತ್ನದ ಮೂಲಕ ಜಿಲ್ಲೆಯಾದ್ಯಂತ ಎಲ್ಲ ಸ್ತರದ ಜನಪ್ರತಿನಿಧಿಗಳ ಸಂಘಟನಾತ್ಮಕ ಸಭೆಗಳನ್ನು ನಡೆಸಲಾಗಿದೆ. ಓರ್ವ ಸಾಮಾನ್ಯ ಕಾರ್ಯಕರ್ತನ ಗೆಲುವಿಗೆ ಜಿಲ್ಲೆಯ ಜನಪ್ರತಿನಿಧಿಗಳು ಬದ್ಧತೆಯಿಂದ ಕೈಜೋಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ದೊಡ್ಡ ಅಂತರದ ಗೆಲುವಿನ ಮೂಲಕ ಕಾರ್ಯಕರ್ತರ ಪಕ್ಷ ಎನಿಸಿರುವ ಬಿಜೆಪಿ ಮಗದೊಮ್ಮೆ ಜಿಲ್ಲೆಯಲ್ಲಿ ವಿಜಯ ಯಾತ್ರೆಯನ್ನು ಮುನ್ನಡೆಸಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ