ಬ್ರಿಟಿಷರ ದಬ್ಬಾಳಿಕೆ, ಅನ್ಯಾಯಕ್ಕೆ ಸಿಡಿದೆದ್ದ ಕಿತ್ತೂರ ಚೆನ್ನಮ್ಮ: ಮಾನೆ

KannadaprabhaNewsNetwork |  
Published : Oct 25, 2026, 02:30 AM IST
ಹಾನಗಲ್‌ನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಡೆದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭಾಗವಹಿಸಿದ್ದರು. | Kannada Prabha

ಸಾರಾಂಶ

ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ಕೆಚ್ಚೆದೆಯ ಕನ್ನಡತಿ, ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಯೋಜಿಸಲಾಗಿತ್ತು.

ಹಾನಗಲ್ಲ: ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ಕೆಚ್ಚೆದೆಯ ಕನ್ನಡತಿ, ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಯೋಜಿಸಲಾಗಿತ್ತು.

ಜಯಂತಿಯಲ್ಲಿ ಭಾಗವಹಿಸಿ ಚೆನ್ನಮ್ಮನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶಾಸಕ ಮಾನೆ, ಬ್ರಿಟಿಷರ ದಬ್ಬಾಳಿಕೆ ಹಾಗೂ ಅನ್ಯಾಯದ ವಿರುದ್ಧ ಸಿಡಿದೆದ್ದು ದೇಶದ ಸ್ವಾತಂತ್ರ್ಯಕ್ಕಾಗಿ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು ಚೆನ್ನಮ್ಮನ ಸಾಹಸ, ಶೌರ್ಯ ಮತ್ತು ತ್ಯಾಗ ಅಜರಾಮರ. ನಾಡಿನ ಸ್ವಾಭಿಮಾನ, ಧೈರ್ಯ ಮತ್ತು ಸ್ವಾತಂತ್ರ್ಯ ಹೋರಾಟದ ಪ್ರತೀಕವಾಗಿರುವ ಚೆನ್ನಮ್ಮನ ಹೆಸರು ಕನ್ನಡ ನಾಡಿನ ಇತಿಹಾಸದಲ್ಲಿ ಚಿರಸ್ಥಾಯಿಯಾಗಿರಲಿದೆ. ಇಂಥ ಧೀಮಂತರ ಸ್ಮರಣೆ ಜಯಂತಿ ಸಂದರ್ಭದಲ್ಲಿ ಮಾತ್ರ ಆಗದೇ ನಿತ್ಯದ ಜೀವನದಲ್ಲಿ ಸಹ ನಡೆಯಬೇಕಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು, ಪಂಚಮಸಾಲಿ ಸಮಾಜದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬ್ರಿಟಿಷರ ಎದೆ ನಡುಗಿಸಿದ ಕಿತ್ತೂರು ರಾಣಿ ಚೆನ್ನಮ್ಮ ನಾರಿ ಶಕ್ತಿಯ ಅಪ್ರತಿಮ ಸಂಕೇತ. ಕನ್ನಡಿಗರ ಸ್ವಾಭಿಮಾನದ ಹೆಮ್ಮೆಯಾಗಿರುವ ಚೆನ್ನಮ್ಮನ ಶೌರ್ಯ, ಪರಾಕ್ರಮ ಚಿರಸ್ಮರಣೀಯ ಎಂದು ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಷ್ಟಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಮಸ್ಯೆಗಳ ತಾಂಡವ!
ಮನೆ-ಮನೆಗೂ ವಿಜ್ಞಾನ ಮುಟ್ಟಿಸುವ ಕೆಲಸವಾಗಲಿ: ಪ್ರೊ. ಸಿ.ಎಸ್. ಅರಸನಾಳ