ಕಿತ್ತೂರು ಸಂಸ್ಥಾನದ ರಾಜ ಮಲ್ಲಸರ್ಜನನ್ನು ವಿವಾಹವಾಗಿ ಅವರ ಮರಣಾನಂತರ ಸಮರ್ಥವಾಗಿ ಕಿತ್ತೂರು ಸಂಸ್ಥಾನವನ್ನು ಮುನ್ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಬ್ರಿಟಿಷರ ವಿರುದ್ಧದ ಸಶಸ್ತ್ರ ಪ್ರತಿರೋಧಕ್ಕೆ ಭದ್ರವಾದ ಅಡಿಪಾಯ ಹಾಕಿದ ಚೆನ್ನಮ್ಮ ಈಕೆಯ ಹೋರಾಟವನ್ನು ಸ್ಫೂರ್ತಿಯಾಗಿಸಿಕೊಂಡು ಸಂಗೊಳ್ಳಿ ರಾಯಣ್ಣ ಮುಂತಾದ ವೀರರು ಹೋರಾಟವನ್ನು ಮುಂದುವರಿಸಿದರು ಎಂದು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಮದ್ದೂರು
ಭಾರತದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದ ಪ್ರಥಮ ಸ್ವಾತಂತ್ರ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ ಎಂದು ತಹಸೀಲ್ದಾರ್ ಡಾ.ಶಿವಕುಮಾರ ಬಿರಾದಾರ ಬಣ್ಣಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ರಾಜ್ಯದ ಹೆಮ್ಮೆಯ ಪ್ರತೀಕ ಕಿತ್ತೂರು ರಾಣಿ ಚೆನ್ನಮ್ಮ ಅವರು ಈಸ್ಟ್ ಇಂಡಿಯಾ ಕಂಪನಿ ಸೈನ್ಯವನ್ನು ಸೋಲಿಸಿ ವೀರವನಿತೆ ಎನಿಸಿಕೊಂಡಿದ್ದಕ್ಕೆ ಇಂದಿಗೆ ಇನ್ನೂರು ವರ್ಷಗಳು ಸಂದಿವೆ ಎಂದರು.
ಕಿತ್ತೂರು ಸಂಸ್ಥಾನದ ರಾಜ ಮಲ್ಲಸರ್ಜನನ್ನು ವಿವಾಹವಾಗಿ ಅವರ ಮರಣಾನಂತರ ಸಮರ್ಥವಾಗಿ ಕಿತ್ತೂರು ಸಂಸ್ಥಾನವನ್ನು ಮುನ್ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಬ್ರಿಟಿಷರ ವಿರುದ್ಧದ ಸಶಸ್ತ್ರ ಪ್ರತಿರೋಧಕ್ಕೆ ಭದ್ರವಾದ ಅಡಿಪಾಯ ಹಾಕಿದ ಚೆನ್ನಮ್ಮ ಈಕೆಯ ಹೋರಾಟವನ್ನು ಸ್ಫೂರ್ತಿಯಾಗಿಸಿಕೊಂಡು ಸಂಗೊಳ್ಳಿ ರಾಯಣ್ಣ ಮುಂತಾದ ವೀರರು ಹೋರಾಟವನ್ನು ಮುಂದುವರಿಸಿದರು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರೇಡ್- 2 ತಹಸೀಲ್ದಾರ್ ಸೋಮಶೇಖರ್, ಶಿರಸ್ತೇದಾರ್ ರಾಘವೇಂದ್ರ, ದಲಿತ ಮುಖಂಡ ಆತಗೂರು ವೆಂಕಟಾಚಲಯ್ಯ, ಮಹಿಳಾ ಸಂಘಟನೆಯ ರಜನಿರಾಜ್, ತಾಲೂಕು ಕೃಷಿಕ ಸಮಾಜದ ನಿರ್ದೇಶಕ ಗೆಜ್ಜಲಗೆರೆ ಚಂದ್ರಶೇಖರ್ ಕಂದಾಯ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.